ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ರಿ. ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ ಚಿತ್ರದ್ರುರ್ಗ ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಅನುಭವ ಮಂಟಪ, ಚಿತ್ರದ್ರುರ್ಗ ಇಲ್ಲಿ ನಡೆದ 18ರ ವಯೋಮಾನದ ಟ್ರೇಡಿಶನಲ್ ಗ್ರೂಪ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ Leg Balance Individuals ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










