ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರಾತಿಗಾಗಿ ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗ ವಿಸ್ತರಿಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.









