ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನಕದಾಸರ ಭಕ್ತಿಯ ಸ್ವರೂಪ, ಸಮಾನತೆಯ ಪ್ರಜ್ಞೆ, ಅಹಿಂಸಾನೆಲೆ, ಧಾರ್ಮಿಕ ಆಚರಣೆಗಳ ನಿರಾಕರಣೆ, ಅವರ ಸಮಾಜ ಸುಧಾರಣೆಯ ಅಂಶಗಳು ಇಂದಿಗೂ ಪ್ರಸ್ತುತ. ಕನಕದಾಸರು ತಮ್ಮ ಕೃತಿಗಳ ಮೂಲಕ ಕುಲಕ್ಕಿಂತ ಗುಣಕ್ಕೆ ಪ್ರಾಮುಖ್ಯತೆ ನೀಡಿ, ಜಾತಿಬೇಧ, ಸಾಮಾಜಿಕ ಅಸಮಾನತೆಗಳನ್ನು ವಿರೋಧಿಸಿ, ಸಮಾನತೆ, ಮಾನವೀಯತೆ, ನೈತಿಕತೆ ಮುಂತಾದ ಸಾರ್ವಕಾಲಿಕ ಮೌಲ್ಯಗಳನ್ನು ಸಾರಿದ ಮಹಾನ್ ದಾರ್ಶನಿಕ ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸುಧಾಕರ್ ದೇವಾಡಿಗ ಬಿ. ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ, ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ, ರಾಷ್ಟçಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಾಹೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಪನ್ಯಾಸ ಮಾಲಿಕೆಯಲ್ಲಿ ‘ಕನಕದಾಸರು – ವರ್ತಮಾನದ ಮುಖಾಮುಖಿʼ ಎಂಬ ವಿಷಯದ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಕನಕದಾಸ ಅಧ್ಯಯನ ಸಂಶೋಧನಾ ಪೀಠದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಕಾರ್ತಿಕ್ ಶೆಟ್ಟಿ ನಿರೂಪಿಸಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಿದ್ಯಾರ್ಥಿಗಳಾದ ಪ್ರಥಾ ಶೆಟ್ಟಿ ವಂದಿಸಿದರು.










