ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಲಾಗಿರುವ 15ನೇ ವರ್ಷದ ವಿದ್ಯಾಗಣಪತಿ ಉತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದರು. ಸಂಘದ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವರ ಯುವಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬಿಲ್ಲವರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.










