ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಪ್ರೌಢ ಶಾಲೆಯಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಮತ್ತು ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಹಾಗೂ ಸಂಜಯ ಗಾಂಧಿ ಪ್ರೌಢ ಶಾಲೆಯ ಇವರ ಸಹಯೋಗದೊಂದಿಗೆ “ಹಸಿರು ಹೊನ್ನು” ಶೀರ್ಷಿಕೆಯಡಿಯಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಹಣ್ಣಿನ ಗಿಡ ನೆಡುವ ಮೂಲಕ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಅಂಪಾರು ಗ್ರಾಮ ಪಂಚಾಯತ್ ಸದಸ್ಯ ಕಿರಣ್ ಹೆಗ್ಡೆ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಸಂಜಯ ಗಾಂಧಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಬಿ., ರೋಟರಿ ಕ್ಲಬ್ ಮಿಡ್ ಟೌನ್ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಬೆಳ್ಳಾಲ, ನಿಕಟಪೂರ್ವ ಅಧ್ಯಕ್ಷ ಶೇಖರ್ ಶೆಟ್ಟಿ, ಮಾಜಿ ಅಧ್ಯಕ್ಷ ಶಂಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ್ ಶೆಟ್ಟಿ, ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಸಂಜಯ ಗಾಂಧಿ ಪ್ರೌಢ ಶಾಲೆಯ ಫಂಡ್ ಸಮಿತಿಯ ಶಾರದಾ, ಕಾರ್ಯಕ್ರಮ ಸಂಯೋಜಕರಾದ ಸತೀಶ್ ಕಾಂಚನ್, ದೀಪಾ ಪೂಜಾರಿ ಹಾಗೂ ಶಾಲೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಾದ ಸುಜಯ್ ಶೆಟ್ಟಿ, ಕಾರ್ತಿಕ್ ಮತ್ತು ಶರಣ್ಯ ಸಂಜಯ ಗಾಂಧಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯ ಕುರಿತು ಮಾಹಿತಿ ನೀಡಿದರು.










