Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಮಾಣಿಕ್ಯ ಎಡಿ ಕಬಡ್ಡಿ ಆಟದಲ್ಲಿ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ತಂಡಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಮಾಣಿಕ್ಯ ಎಡಿ ಕಬಡ್ಡಿ ಆಟದಲ್ಲಿ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ತಂಡಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಮೂರು ದಿನಗಳ ತನಕ, ಗೋಬಿಂದ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬಹದೂರ್, ಪಂಜಾಬ್‌ನಲ್ಲಿ ನಡೆದ ರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗಳಲ್ಲಿ ಕೆಎಜಿಒ ಕರ್ನಾಟಕ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಹೆಮ್ಮೆಯನ್ನುಂಟು ಮಾಡಿದ್ದಾರೆ.

    Click Here

    Call us

    Click Here

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳಾದ ಭವ್ಯಶ್ರೀ ಎಸ್ ಎಸ್, ವಿಜಯಲಕ್ಷ್ಮೀ ಎಚ್ ಎಚ್, ಮಾಣಿಕ್ಯ ಎ ಡಿ, ದೀಕ್ಷಾ ಕೆ ಸಿ, ತನಿಷ್ಕಾ ವಿ ಎಮ್ ಭಾಗವಹಿಸಿದ್ದರು. ತಂಡದ ನಿರ್ವಾಹಣೆಯನ್ನು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಲತಾ ಗೌಡ ಅವರು ನಡೆಸಿದ್ದರು.

    ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣ ಹುಲ್ಲಾಳ ನೇತೃತ್ವದಲ್ಲಿ ಶಾಲೆಯ ಕಬಡ್ಡಿ ತರಬೇತುದಾರರಾದ ಕೇಶವ, ಬೈಂದೂರು ಅವರು ವಿದ್ಯಾರ್ಥಿಗಳಿಗೆ ಸೂಕ್ತವಾದ ಮಾರ್ಗದರ್ಶನ ಗೈದಿದ್ದರು. ಇವರಲ್ಲಿ ಮಾಣಿಕ್ಯ ಎಡಿ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಆಟಗಾರ್ತಿಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

    ಇವರೆಲ್ಲರನ್ನೂ ಶಾಲೆಯ ವಾದ್ಯಮೇಳದೊಂದಿಗೆ ಸ್ವಾಗತಿಸಿ, ಶಾಂತಾರಾಮ ವೇದಿಕೆಯಲ್ಲಿ ಗೌರವಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶರಣ ಕುಮಾರ ಅಭಿನಂದಿಸಿ ಮಾತನಾಡಿ, ಸಾಧನೆ ಎಂಬುದು ಒಮ್ಮೆಲೇ ದೊರಕಲಾರದು. ಪ್ರತಿಯೊಂದು ಮೆಟ್ಟಿಲನ್ನು ಏರಿ ಸಾಗಿದರೆ ಮಾತ್ರ ಸಾಧಿಸಲು ಸಾಧ್ಯ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಮಾಣಿಕ್ಯ ಶಾಲೆಯ ಮಾಣಿಕ್ಯಳಾಗಿದ್ದಾಳೆ. ಎನ್ನುತ್ತಾ ವಿದ್ಯಾರ್ಥಿಗಳ ಜೀವನ ಹೇಗಿರಬೇಕೆಂದು ತಿಳಿಸುತ್ತಾ ಈ ಸಾಧನೆಗೆ ಸಹಕರಿಸಿದ ಸರ್ವರನ್ನೂ ಸ್ಮರಿಸಿದರು.

    ಶಾಲಾ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಮಾತನಾಡಿ, ಗಿನ್ನಿಸ್ ದಾಖಲೆಯಂತೆ ಇದು ಕೂಡ ಮಹತ್ತರವಾದ ಹೆಜ್ಜೆಯಾಗಿದ್ದು, ಮೊದಲ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಾಧನೆ ಮಾಡಿರುವುದು ಹೆಮ್ಮೆಯೆನಿಸುತ್ತಿದೆ. ಮುಂದಿನ ವರುಷಗಳಲ್ಲಿ ಇನ್ನಷ್ಟು ಪ್ರತಿಭೆಗಳು ಹೊರಹೊಮ್ಮಬೇಕಾಗಿವೆ. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಬೇಕಾಗಿದೆ. ಎಂದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ  ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್, ಪ್ರಾಥಮಿಕಶಾಲಾ ಮುಖ್ಯೋಪಾಧ್ಯಾಯ ಸುಜಾತಾ ಸದಾರಾಮ ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಸಂಯೋಜಕರಾದ ಶ್ರೀಮಧು ಕೆ.ಎಲ್ ಕಾರ್ಯಕ್ರಮವನ್ನು ನಿರ್ವಹಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    3 + thirteen =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.