Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಆಗಮನ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
    alvas nudisiri

    ಆಳ್ವಾಸ್ ಆಗಮನ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

    Updated:02/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಕೃತಕ ಬುದ್ಧಿಮತ್ತೆಯ ಬೆಳವಣಿಗೆಯಿಂದ ಸಂವೇದನಾಶೀಲ ಜ್ಞಾನ ಅಥವಾ ಸೂಚ್ಯ ಜ್ಞಾನದ ಬಳಕೆ ಕ್ಷೀಣಿಸುತ್ತಿರುವ ಆತಂಕಕಾರಿ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ನುಡಿದರು.

    Click Here

    Call us

    Click Here

    ಅವರು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 2025-26ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ- ಸ್ವಾಗತ ಕಾರ್ಯಕ್ರಮ ’ಆಳ್ವಾಸ್ ಆಗಮನ’ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಕೃತಕ ಬುದ್ಧಿ ಮತ್ತೆ ಮೇಲೆ ಸಂಪೂರ್ಣ ಅವಲಂಬನೆಯಾದರೆ ಮನುಷ್ಯನ ಅನುಭವದಿಂದ ಕಲಿಯುವ ಶಕ್ತಿ, ಪ್ರಶ್ನಿಸುವ ಸ್ವಭಾವ, ಆಳವಾದ ಚಿಂತನೆ  ಸೃಜಿಸಲಾರದು. ಎಐ ಅನ್ನು ಪ್ರೇರಕ ಶಕ್ತಿಯಾಗಿ ಬಳಸಿಕೊಳ್ಳುವುದು ಸೂಕ್ತ. ಅದು ನಮಗೆ ಹೊಸ ಆಲೋಚನೆಗಳನ್ನು ಹುಟ್ಟಿಸಬಲ್ಲದು, ಆದರೆ ಆ ಆಲೋಚನೆಗಳಿಗೆ ಜೀವ ತುಂಬಲು ಮನುಷ್ಯನಿಂದ ಮಾತ್ರ ಸಾಧ್ಯ ಎಂದರು. 

    ಮೂಲಭೂತ ಜ್ಞಾನ ಗಟ್ಟಿಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿ, ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಹೆಚ್ಚುತ್ತದೆ. ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ಸಾಮಾರ್ಥರಾಗುತ್ತಾರೆ. ಅಂತಹ ಶಿಕ್ಷಣದ ಅಗತ್ಯ ನಮ್ಮ ಮುಂದಿದೆ ಎಂದರು.

    ವೈವಿಧ್ಯತೆಯನ್ನು ಪ್ರೀತಿಸಿ. ಪರಸ್ಪರ ಭಿನ್ನತೆಯನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಶಾಂತಿ, ಪ್ರೀತಿ, ಮತ್ತು ಪ್ರಗತಿ ಸಾಧ್ಯ. ಆಧುನಿಕ ಯುಗದಲ್ಲಿ ಹವ್ಯಾಸವು ಮಾನವನಿಗೆ ಸಮತೋಲನದ ಮನಸ್ಥಿತಿಯನ್ನು ನೀಡಬಲ್ಲದು.  ಅದು ಮನಸ್ಸಿಗೆ ಸಂತೋಷ ನೀಡುವುದಷ್ಟೆ ಅಲ್ಲ, ವ್ಯಕ್ತಿತ್ವವನ್ನೂ ಸುಂದರಗೊಳಿಸುತ್ತದೆ ಎಂದರು. 

    Click here

    Click here

    Click here

    Click Here

    Call us

    Call us

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಈ ಆವರಣದ ಮೂಲ ಶಕ್ತಿ ನಮ್ಮ ವಿದ್ಯಾರ್ಥಿಗಳು, ಪೋಷಕರು ಹಾಗೂ ಪಾಲಕರು. ನಮ್ಮ ನಿಜವಾದ ಬ್ರಾಂಡ್ ನಮ್ಮ ವಿದ್ಯಾರ್ಥಿಗಳು.

    ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ತ್ಯಾಗ ಅತ್ಯಂತ ಪ್ರಮುಖ. ಅದನ್ನು ನಾವು ಸದಾ ಗೌರವಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ನೀವು ಆಯ್ಕೆ ಮಾಡಿದ ಕೋರ್ಸ ವಿಶೇಷತೆಯನ್ನು ತರಲಾರದು.  ನಿಮ್ಮ ತೊಡಗಿಸಿಕೊಳ್ಳುವಿಕೆ ಮತ್ತು ಪರಿಶ್ರಮವೇ ನಾಳೆ ನಿಮ್ಮನ್ನು ಇತರರಿಂದ ಭಿನ್ನರನ್ನಾಗಿಸುತ್ತದೆ ಎಂದರು.

    ಕಾಲೇಜಿನ ರಿಸರ್ಚ ಡೀನ್ ಡಾ ರಿಚರ್ಡ ಪಿಂಟೋ ಹಾಗೂ  ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ಫೆರ್ನಾಂಡೀಸ್ ಕಾಲೇಜಿನ ವೈಶಿಷ್ಟ್ಯತೆಯನ್ನು ಪ್ರಸ್ತುತ ಪಡಿಸಿದರು. ಡಾ. ಶಶಿಕುಮಾರ್ ಸ್ವಾಗತಿಸಿ, ವಿದ್ಯಾರ್ಥಿನಿ ಶಾರ್ವರಿ ಶೆಟ್ಟಿ ನಿರೂಪಿಸಿ, ಡಾ. ರಾಮ್‌ಪ್ರಸಾದ ವಂದಿಸಿದರು.

    ಆಳ್ವಾಸ್ ಆಗಮನದದ ಹಿನ್ನಲೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹನ್ನೆರಡು ದಿನಗಳಲ್ಲಿ ಒಟ್ಟು 55ಕ್ಕೂ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಪ್ರಮುಖ ಜ್ಞಾನ ಶಾಖೆಗಳಲ್ಲಿ ತರಬೇತಿ ಹಾಗೂ ಕಾರ್ಯಗಾರ ನಡೆಯಲಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    16 + twelve =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.