Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಸದ್ ಖೇಲ್ ಮಹೋತ್ಸವ್‌ 2025: ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಬೃಹತ್‌ ವೇದಿಕೆ – ಸಂಸದ ಬಿ.ವೈ ರಾಘವೇಂದ್ರ
    ಊರ್ಮನೆ ಸಮಾಚಾರ

    ಸಂಸದ್ ಖೇಲ್ ಮಹೋತ್ಸವ್‌ 2025: ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಬೃಹತ್‌ ವೇದಿಕೆ – ಸಂಸದ ಬಿ.ವೈ ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು. ಸೆ.06
    : ಕೇಂದ್ರ ಸರ್ಕಾರ ದೇಶದ ಕ್ರೀಡಾ ಕ್ಷೇತ್ರವನ್ನು ಮತ್ತೊಂದು ಮಹತ್ವದ ಘಟ್ಟಕ್ಕೆ ಕೊಂಡೊಯ್ಯಲು ದೇಶದ ಇತಿಹಾಸದಲ್ಲಿ ಮೊದಲ ಪ್ರಯತ್ನವಾಗಿ ದೇಶದಾದ್ಯಂತ ಜಾರಿಗೆ ತಂದಿರುವ “ಸಂಸದ್ ಖೇಲ್ ಮಹೋತ್ಸವ್-2025” ನೋಂದಣಿ ಪ್ರಕ್ರಿಯೆಗೆ ಇಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ಕೊಡಲಾಯಿತು.

    Click Here

    Call us

    Click Here

    ಈ ವೇಳೆ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2030ರಲ್ಲಿ “ಕಾಮನ್ ವೇಲ್ತ್ ಗೇಮ್ಸ್” ಹಾಗೂ 2036ರಲ್ಲಿ “ಒಲಿಂಪಿಕ್ ಗೇಮ್ಸ್” ಆಯೋಜನೆ ಮಾಡಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದೆ. ಈಗಾಗಲೇ “ಖೇಲೋ ಇಂಡಿಯಾ” ಹಾಗೂ “ಫಿಟ್ ಇಂಡಿಯಾ” ಯೋಜನೆ ಜಾರಿಯ ಮೂಲಕ ದೇಶದಲ್ಲಿರುವ ಲಕ್ಷಾಂತರ ಕ್ರೀಡಾ ಪ್ರತಿಭೆಗಳನ್ನು ಮುನ್ನೆಲೆಗೆ ತಂದು ವಿಶ್ವದ ಬಲಿಷ್ಠ ರಾಷ್ಟ್ರಗಳ ಕ್ರೀಡಾ ಪಟುಗಳೊಂದಿಗೆ ಪೈಪೋಟಿ ನಡೆಸಿ ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಿಕೊಂಡಿದ್ದಾರೆ.

    ಇದರ ಮುಂದುವರೆದ ಭಾಗವಾಗಿ ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಇನ್ನೂ ಅನೇಕ ಕ್ರೀಡಾ ಪಟುಗಳನ್ನು ಮತ್ತು ಕ್ರೀಡಾ ಆಸಕ್ತರನ್ನು ಮುನ್ನೆಲೆಗೆ ತರಲು ಈ ಯೋಜನೆ ಮಹತ್ವದ ಮೈಲಿಗಲ್ಲಾಗುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

    ಇದು ಕೇವಲ ದೇಶದ ಕ್ರೀಡಾ ಹಬ್ಬವಾಗದೆ ದೇಶದ ಹಿರಿಮೆ, ಗರಿಮೆ ವಿಶ್ವ ಭೂಪಟದಲ್ಲಿ ರಾರಾಜಿಸಲು ವೇದಿಕೆಯಾಗಿದೆ. ಈ ಮೂಲಕ ದೇಶದ ಕ್ರೀಡಾ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಲು ಮುನ್ನುಡಿ ಬರೆಯಲು ವಿಶೇಷ ವೇದಿಕೆಯಾಗಿದೆ ಎಂದರು.

    ಈ ವೇಳೆ ಶಾಸಕ ಗುರುರಾಜ್‌ ಗಂಟಿಹೊಳೆ, ಬೈಂದೂರು ಬಿಜೆಪಿ ಅಧ್ಯಕ್ಷೆ ಅನಿತಾ ಮರವಂತೆ, ದಿಶಾ ಸಮಿತಿ ಸದಸ್ಯೆ ಪ್ರಿಯದರ್ಶಿನಿ ಬೆಸ್ಕೂರು, ಕಾರ್ಯದರ್ಶಿಗಳಾದ ಕರಣ್‌ ಪೂಜಾರಿ, ಗೋಪಾಲ ಪೂಜಾರಿ ವಸ್ರೆ, ಮುಖಂಡರಾದ ದೀಪಕ್‌ ಕುಮಾರ್‌ ಶೆಟ್ಟಿ, ಸುರೇಶ್‌ ಬಟ್ವಾಡಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

    09/06/2026

    ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

    09/06/2026

    ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ

    09/06/2026
    Leave A Reply Cancel Reply

    nine − seven =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.