ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್ – 2025’ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ದಿನವನ್ನು ಸ್ಮರಣೀಯವಾಗಿಸಲು ವಿವಿಧ ಆಟಗಳು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದ ಪ್ರಮುಖ ಅಂಶವಾಗಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೇಘರಾಜನನ್ನು ‘ರಾಜಕುಮಾರ’ ಹಾಗೂ ಪ್ರಥಮ ಬಿಸಿಎ ವಿದ್ಯಾರ್ಥಿನಿ ಮೌಲ್ಯ, ‘ರಾಜಕುಮಾರಿ’ ಎಂದು ಆರಿಸಲ್ಪಟ್ಟರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ, ಬಿಸಿಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವೃಂದದವರು, ತೃತೀಯ ಬಿಸಿಎ ಮತ್ತು ದ್ವಿತೀಯ ಬಿಸಿಎ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಶಿಫಾ ಕಾರ್ಯಕ್ರಮವನ್ನು ನಿರೂಪಿಸಿದರು.















