ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್ (7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್. ಮೊಗವೀರ (7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.










