ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬೆಳ್ಳಾಲ, ನಾಡ ಹಾಗೂ 74 ಉಳ್ಳೂರು ಗ್ರಾಮದಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 1.80 ಕೋಟಿ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ “Multi Purpose Center (MPC)” ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಗುರುವಾರದಂದು ಶಂಕು ಸ್ಥಾಪನೆ ನೆರವೇರಿಸಿದರು.

ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ:
ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ, ಹರ್ಕೂರು, 74 ಉಳ್ಳೂರು ಗ್ರಾಮಗಳಲ್ಲಿ “PMJANMAN” ಯೋಜನೆಯಡಿ ಸುಮಾರು ರೂ. 4.35 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಶಂಕು ಸ್ಥಾಪನೆ ನೆರವೇರಿಸಿ, ನೂಜಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು.


ಈ ವೇಳೆ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲದ ಅಧ್ಯಕ್ಷರಾದ ಅನಿತಾ ಆರ್ ಕೆ., ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.















