ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರೀಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, 2954444, ಸಹಾಯವಾಣಿ ಸಂಖ್ಯೆ: 8277200300 ಅಥವಾ ಉಡುಪಿ, ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.










