ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಮುಖ್ಯ. ಇಲ್ಲಿ ಅಂಕಗಳಿಗಿಂತಲೂ ಕೌಶಲ್ಯಗಳಿಗೆ ಹೆಚ್ಚು ಪ್ರಾಧ್ಯಾನತೆಯಿದ್ದು, ವಿದ್ಯಾರ್ಥಿಗಳಿಗೆ ನಾಯಕತ್ವ, ಕ್ರಿಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಹಲವಾರು ಅವಕಾಶಗಳಿದ್ದು, ಅಂತಹ ಅವಕಾಶಗಳ ಸದುಪಯೋಗ ಪಡೆದುಕೊಳ್ಳಿ ಹಾಗೂ ಜೀವನಾನುಭವ ಬದುಕಿನ ಬಹುದೊಡ್ಡ ಪಾಠ ಎಂದು ವಂಡ್ಸೆ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳ ಪದವಿ ಜೀವನಕ್ಕೆ ಶುಭ ಹಾರೈಸಿದರು.
ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್.ಕ್ಯೂ.ಎ.ಸಿ. ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀಶಾಂತ್ ಮತ್ತು ತಂಡ ಪ್ರಾರ್ಥಿಸಿದರು. ಸಮರ್ಥ ಅತಿಥಿಗಳನ್ನು ಪರಿಚಯಿಸಿದರು. ರಕ್ಷಿತ್ ಸ್ವಾಗತಿಸಿ, ಅಭಿಷೇಕ್ ನಿರೂಪಿಸಿ, ವಿಶ್ವನಾಥ್ ಶೆಟ್ಟಿ ವಂದಿಸಿದರು.















