ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ದೈಹಿಕ ಶಿಕ್ಷಕ ಉಪನ್ಯಾಸಕರಾದ ಕೃಷ್ಣ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿ ಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










