Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೋಜು ಮಸ್ತಿಗೆಂದು ತೆರಳಿ ನದಿಯಲ್ಲಿ ಮುಳುಗಿದ ಇಬ್ಬರ ರಕ್ಷಣೆ. ಮರವಂತೆಯಲ್ಲಿ ಅಣುಕು ಕಾರ್ಯಚರಣೆ
    ಊರ್ಮನೆ ಸಮಾಚಾರ

    ಮೋಜು ಮಸ್ತಿಗೆಂದು ತೆರಳಿ ನದಿಯಲ್ಲಿ ಮುಳುಗಿದ ಇಬ್ಬರ ರಕ್ಷಣೆ. ಮರವಂತೆಯಲ್ಲಿ ಅಣುಕು ಕಾರ್ಯಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮರವಂತೆಯ ಕೊಲ್ಲೂರು ನದಿಯಲ್ಲಿ ಮೋಜು ಮಸ್ತಿಗೆ ತೆರಳಿದ್ದು, ಪ್ರವಾಸಿಗರ ಬೋಟ್ ಮಗುಚಿ, ನೀರು ಪಾಲಾದ ಇಬ್ಬರನ್ನು ಎನ್.ಡಿ.ಆರ್.ಎಫ್ ತಂಡವು ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದೆ.

    Click Here

    Call us

    Click Here

    ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಂತಹ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು ದೋಣಿ ವಿಹಾರಕ್ಕೆ ನಿರ್ಬಂಧವಿರುವುದಾಗಿ ತಿಳಿಸಿದರೂ ಅದನ್ನು ಲೆಕ್ಕಿಸದೇ ಪ್ರಕ್ಷಬ್ಧ ವಾತಾವರಣವಿದ್ದರೂ ನದಿಗೆ ತೆರಳಿದಾಗ ಭಾರೀ ಗಾಳಿಗೆ ಅವರುಗಳು ಸಂಚರಿಸುತ್ತಿದ್ದ ಬೋಟ್ ಮಗುಚಿ ಅದರಲ್ಲಿದ್ದ ನಾಲ್ವರು ನೀರಿನಲ್ಲಿ ಮುಳುಗಿ, ಒಬ್ಬ ಈಜಿ ದಡ ಸೇರಿದರೆ, ಮತ್ತೊಬ್ಬ ಈಜು ಹೊಡೆದು ಸುಸ್ತಾಗಿ ಮುಳುಗುವ ಹಂತದಲ್ಲಿದ್ದಾಗ ಅಲ್ಲಿನ ಸ್ಥಳೀಯ ಜನರು ಹಗ್ಗದ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ದಡಕ್ಕೆ ತಲುಪುವಂತೆ ಮಾಡಿದರು. ಸರಿಯಾಗಿ ಈಜು ಬಾರದೆ ಮುಳುಗುವ ಹಂತದಲ್ಲಿದ್ದ ಮತ್ತೊಬ್ಬನನ್ನು ಸ್ಥಳೀಯ ನಾಗರಿಕರು ನೀರಿನಿಂದ ಎಳೆದು ತಂದು ದಡ ಸೇರಿಸಿ ರಕ್ಷಿಸಿದರು. ಮತ್ತೊಬ್ಬ ಸ್ನೇಹಿತನು ಕಾಣದೇ ಇರುವುದನ್ನು ಕಂಡ ಇತರೆ ಪ್ರವಾಸಿಗರು ಅವರನ್ನು ರಕ್ಷಿಸುವಂತೆ ಸ್ಥಳೀಯ ಜನರ ಬಳಿ ಗೋಗರೆಯುತ್ತಿದ್ದರು.

    ಆಗ ಸ್ಥಳಕ್ಕೆ ಆಗಮಿಸಿದ ಎನ್.ಡಿ.ಆರ್.ಎಫ್ ತಂಡವು ತಮ್ಮ ಬೋಟ್‌ಗಳ ಮೂಲಕ ಕಾಣೆಯಾದ ಯುವಕನನ್ನು ಹುಡುಕಲು ಮೂರು ಬೋಟ್‌ಗಳಲ್ಲಿ ತೆರಳಿದರು. ನಾಪತ್ತೆಯಾಗಿದ್ದವನ್ನು ಹುಡುಕಾಡತೊಡಗಿದರು. ಆತ ಕಾಣದೇ ಇದ್ದಾಗ ಎನ್.ಡಿ.ಆರ್.ಎಫ್ ನ ಆರೇಳು ಜನ ಸಿಬ್ಬಂದಿಗಳು ನದಿ ಪಾತ್ರದಲ್ಲಿ ತೆರಳಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆ, ಮುಳುಗುತಜ್ಞರಿಂದ ಹುಡುಕಾಟ ಆರಂಭಿಸಿದ ಸ್ವಲ್ಪ ಹೊತ್ತಿನಲ್ಲಿಯೇ ನೀರಿನಲ್ಲಿ ಮುಳುಗಿದ ವ್ಯಕ್ತಿಯನ್ನು ಎಳೆದು ತಂದು ಬೋಟ್‌ನಲ್ಲಿ ಹತ್ತಿಸಿಕೊಂಡು ದಡಕ್ಕೆ ತಂದರು. ಆ ಕ್ಷಣದಲ್ಲಿ ಆತ ಉಸಿರಾಟ ಇಲ್ಲದೇ ನಿಂತಿರುವುದನ್ನು ಕಂಡು ಆತನಿಗೆ ಸಿ.ಪಿ.ಆರ್ ಮಾಡುವುದರೊಂದಿಗೆ ಕೃತಕ ಉಸಿರಾಟ ನೀಡಿದ ಹಿನ್ನೆಲೆ, ಆತ ಉಸಿರಾಟ ಪುನರಾರಂಭಿಸಿದರು.

    ಸ್ಥಳೀಯ ಬೈಂದೂರಿನ ವೈದ್ಯರು ಅವರನ್ನು ಪರೀಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದರು. ಇದರೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್.ಡಿ.ಆರ್.ಎಫ್ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ ಪ್ರವಾಹ ಕುರಿತ ಅಣುಕು ಪ್ರದರ್ಶನವು ಸಮಾಪ್ತಿಗೊಂಡಿತು.

    ಇದೇ ಸಂದರ್ಭದಲ್ಲಿ ಸಹಾಯಕ ಕಮೀಷನರ್ ರಶ್ಮಿ ಮಾತನಾಡಿ, ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಮಾಡುವುದರೊಂದಿಗೆ ಜನರ ಪ್ರಾಣ, ಆಸ್ತಿ-ಪಾಸ್ತಿಗಳನ್ನು ಉಳಿಸುವ ನಿಟ್ಟಿನಲ್ಲಿ ಅಭ್ಯಾಸದ ದೃಷ್ಠಿಯಿಂದ ಇಂದು ಮರವಂತೆಯಲ್ಲಿ ಪ್ರವಾಹ ಕುರಿತ ಅಣುಕು ಪ್ರದರ್ಶನವನ್ನು ನಡೆಸಲಾಯಿತು. ಈ ಅಣುಕು ಪ್ರದರ್ಶನವು ನೈಜವಾಗಿ ನಡೆದಿದೆ ಎಂಬ ರೀತಿಯಲ್ಲಿ ಕಂಡುಬಂದಿದ್ದು, ವಿಶೇಷವಾಗಿತ್ತು. ಇಂತಹ ಅಭ್ಯಾಸಗಳು ಭವಿಷ್ಯದ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ. ಕೆಲವೊಮ್ಮೆ ಪರಿಣಿತಿ ಇಲ್ಲದೇ ರಕ್ಷಣಾ ಕಾರ್ಯಾಚರಣೆ ಮಾಡಿದಂತಹ ಸಂದರ್ಭದಲ್ಲಿ ಪ್ರಾಣಾಪಾಯಗಳಾಗುವ ಸಾಧ್ಯತೆ ಇರುತ್ತವೆ. ಅನುಭವ ಹಾಗೂ ಕುಶಲತೆಯಿಂದ ರಕ್ಷಣಾ ಕಾರ್ಯಗಳನ್ನು ಮಾಡಿದಾಗ ಎಲ್ಲರನ್ನೂ ಉಳಿಸಲು ಸಾಧ್ಯ. ಈ ಅಣುಕು ಪ್ರದರ್ಶನ ಒಂದು ಮಾದರಿ. ಸಾರ್ವಜನಿಕರು ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತ ನೀಡುವಂತಹ ಎಚ್ಚರಿಕೆಯ ಆದೇಶ ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಯು ಕಲ್ಲುಟಕರ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ರವಿ, ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ, ಇ.ಓ. ರಾಜ್‌ಕುಮಾರ್, ಬಿ.ಓ ನಾಗೇಶ್ ನಾಯ್ಕ್, ಬೈಂದೂರು ಎನ್.ಡಿ.ಆರ್.ಎಫ್ 10 ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್, ವಿದ್ಯಾರ್ಥಿಗಳು, ಸ್ಥಳೀಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    twenty − one =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.