ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನಾರಾಯಣ ಗುರುಗಳ ಆದರ್ಶಗಳನ್ನು ಮತ್ತು ಉನ್ನತ ಮೌಲ್ಯಗಳನ್ನು ಅರಿತುಕೊಂಡು ಅದನ್ನು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ ಜನ್ಮದಿನಾಚರಣೆ ನಿಜವಾದ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾರಾಯಣ ಗುರುಗಳ ವಿಶ್ವಮಾನವ ತತ್ವವನ್ನು ಈ ಜಗತ್ತಿನ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತವಾದ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸದಸ್ಯರಾದ ಶಂಕರ ಪೂಜಾರಿ, ಗೋಪಾಲ ಚಂದನ್, ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ ಹಾಗೂ ವಸಂತ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಿ. ಎ ಆರ್. ಲಕ್ಷ್ಮಣ ವಂದಿಸಿದರು.















