Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್: ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ
    alvas nudisiri

    ಆಳ್ವಾಸ್: ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ.  ಆದರೆ ವಿದ್ಯಾರ್ಥಿಯೂ ತನ್ನ ಆಸಕ್ತಿ, ಸಾಮರ್ಥ್ಯ ಮತ್ತು ಕನಸುಗಳಿಗೆ ತಕ್ಕಂತೆ ವಿಭಿನ್ನ ವೃತ್ತಿ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು ಎಂದು ಬೆಂಗಳೂರಿನ ಭಾರತೀಯ  ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಸಕ್ಷಮ್ ಜೈನ್ ನುಡಿದರು.

    Click Here

    Call us

    Click Here

    ಅವರು ಆಳ್ವಾಸ್ ಪದವಿಪೂರ್ವ ಕಾಲೇಜು  ಆಯೋಜಿಸಿದ್ದ “ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ” ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 

    ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಚಿತ್ರಕಲೆ ಮುಂತಾದ ಅನೇಕ ಸೃಜನಾತ್ಮಕ ಕ್ಷೇತ್ರಗಳು ವಿದ್ಯಾರ್ಥಿಗಳಿಗೆ ದೊಡ್ಡ ಯಶಸ್ಸನ್ನು ನೀಡಬಲ್ಲವು.  ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವುದು, ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ವಿದ್ಯಾರ್ಥಿಗಳಿಗೆ ಲಭ್ಯವಿರುವ ಇನ್ನೊಂದು ದೊಡ್ಡ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಆಸಕ್ತಿ ಮತ್ತು ಕನಸುಗಳಿಗೆ ತಕ್ಕಂತೆ ಶಿಕ್ಷಣದ ಅನೇಕ ದಾರಿಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕು ಎಂದರು. 

    ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಎಟಿ, ಬಿಐಟಿಎಸ್‌ಎಟಿ , ಯುಸಿಇಇಡಿ, ವಿಐಟಿಇಇಇ, ಎನ್‌ಐಎಫ್‌ಟಿ, ಐಸಿಎಆರ್‌, ಎನ್‌ಇಎಸ್‌ಟಿ , ಐಎಟಿ, ಐಎಮ್‌ಎಟಿ , ಸಿಒಎಮ್‌ಇಡಿಕೆ, ಎನ್‌ಎಫ್‌ಎಟಿ  ಮಾಹಿತಿ ನೀಡಿದರು.

    ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಭಾರತೀಯ  ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಕಾವ್ಯಾ ಮಾತನಾಡಿ,  ಸಮಯ ನಿರ್ವಹಣೆ ಜೀವನದಲ್ಲಿ  ಅತೀ ಅಗತ್ಯ. ಸಮಯ ವ್ಯರ್ಥ ಮಾಡದೇ ಉಪಯುಕ್ತವಾಗಿ ಬಳಸುವುದು ತಯಾರಿ ಹಂತದಲ್ಲಿ ಬಹಳ ಅವಶ್ಯ. ಸಮಯವನ್ನು ಸರಿಯಾಗಿ ಬಳಸಿದರೆ, ಓದು ಹಾಗೂ ವಿಶ್ರಾಂತಿಯೊಂದಿಗೆ, ಸಮತೋಲಿತ ಜೀವನ ನಡೆಸಬಹುದು. ಜೊತೆಯಲ್ಲಿ ಯಾವ ಅಧ್ಯಾಯಕ್ಕೆ ಹೆಚ್ಚು ಗಮನ ಕೊಡಬೇಕು, ಯಾವ ರೀತಿಯ ಪ್ರಶ್ನೆಗಳು ಬರುವ ಸಾಧ್ಯತೆ ಇದೆ ಎಂಬುದರ ಕುರಿತಂತೆ ಒಂದು ಸ್ಪಷ್ಟ ಯೋಜನೆ ರೂಪಿಸಬೇಕು. ಯೋಜನೆ ಇಲ್ಲದಿದ್ದರೆ ಹೆಚ್ಚು ಶ್ರಮ ಪಟ್ಟರೂ ಫಲ ಪಡೆಯಲು ಸಾಧ್ಯವಿಲ್ಲ.  ಯೋಗ, ವ್ಯಾಯಾಮ, ಧ್ಯಾನ, ಹವ್ಯಾಸಗಳ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು. ಒತ್ತಡವನ್ನು ನಿಯಂತ್ರಣದಲ್ಲಿಟ್ಟಾಗ ಮಾತ್ರ ಮನಸ್ಸು  ಶಾಂತವಾಗಿರುತ್ತದೆ ಮತ್ತು ಅಧ್ಯಯನ ಫಲಕಾರಿಯಾಗಬಲ್ಲದು ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಜಾನ್ಸಿ ಪಿ. ಎನ್. ಮತ್ತು ಕಾರ್ಯಕ್ರಮ ಸಂಯೋಜಕಿ ರಮ್ಯಾ ರೈ ಇದ್ದರು. ಆಯನಾ ವಿ. ರಮಣ್ ನಿರೂಪಿಸಿ, ಸುಪ್ರೀತ್ ವಂದಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    15 − 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.