Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭವಿಷ್ಯದ ಭವ್ಯ ಭಾರತವನ್ನು ಕಟ್ಟುವ ಕೆಲಸ ಇಂದಿನ ಯುವಜನತೆಯ ಮೇಲಿದೆ: ಹರಿರಾಮ್ ಶಂಕರ್
    ಕ್ಯಾಂಪಸ್ ಕಾರ್ನರ್

    ಭವಿಷ್ಯದ ಭವ್ಯ ಭಾರತವನ್ನು ಕಟ್ಟುವ ಕೆಲಸ ಇಂದಿನ ಯುವಜನತೆಯ ಮೇಲಿದೆ: ಹರಿರಾಮ್ ಶಂಕರ್

    Updated:10/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭವಿಷ್ಯದ ಭವ್ಯ ಭಾರತವನ್ನು ಕಟ್ಟುವ ಕೆಲಸ ಇಂದಿನ ಯುವಜನತೆಯ ಮೇಲಿದೆ. ದೇಶವನ್ನು ಸುಪರ್ ಪವರ್ ಆಗಬೇಕು ಅಂದರೆ ಮೊದಲು ಇಂದಿನ ಯುವ ಜನತೆ ಆ ನಿಟ್ಟಿನಲ್ಲಿ ಕನಸು ಕಾಣಬೇಕು ಎಂದು ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕರೆ ನೀಡಿದರು.

    Click Here

    Call us

    Click Here

    ಅವರು ಬುಧವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜೆಸಿಐ ಸಹಯೋಗದಲ್ಲಿ ಕಾಲೇಜಿನ ಭರವಸೆ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂಥ್ ರೆಡ್ ಕ್ರಾಸ್ ಮತ್ತು ಎನ್.ಸಿ.ಸಿ ನೇವಿ ಮತ್ತು ಆರ್ಮಿ ಘಟಕಗಳು ಆಶ್ರಯದಲ್ಲಿ ನಡೆದ ಮಾದಕ ವ್ಯಸನದ ದುಷ್ಪರಿಣಾಮಗಳು, ಸೈಬರ್ ಅಪರಾಧ, ವೃತ್ತಿ ಮಾರ್ಗದರ್ಶನ ಕುರಿತ ವಿಶೇಷ ಉಪನ್ಯಾಸ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

    ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡು ಆ ಗುರಿಯಲ್ಲಿ ಸಫಲತೆ ಪಡೆಯುವವರೆಗೂ ಸುತ್ತ ಪ್ರಯತ್ನ ಪಡಬೇಕು. ಯಾವುದೇ ಕಾರಣಕ್ಕೂ ಮಧ್ಯೆ ನಿಲ್ಲಿಸಬಾರದು. ನಿರಂತರವಾದ ಅಪರಿಚಿತ ಪ್ರಯತ್ನ ಮತ್ತು ಛಲ ಇರಬೇಕು. ದೊಡ್ಡ ದೊಡ್ಡ ಕನಸುಗಳನ್ನು ಕಾಣುವ ಮೂಲಕ ದೇಶವನ್ನು ಎತ್ತರಕ್ಕೆ ತರಬೇಕು ಎಂದು ಹೇಳಿದರು.

    ಮಾದಕ ವಸ್ತುಗಳ ವ್ಯಸನಿ ಎಂಬುದು ಅತಿಮೂಲ್ಯ ಜೀವನವನ್ನು ಹಾಳುಗೆಡವಿ ಬಿಡುತ್ತದೆ. ಅದರ ವ್ಯಸನಕ್ಕೆ ಒಳಗಾಗಿ ಸುಂದರ ಬದುಕನ್ನು ಹಾಳು ಮಾಡಿಕೊಳ್ಳಬೇಡಿ. ನಿಮಗೆ ಒಳ್ಳೆಯ ಭವಿಷ್ಯ ಇದೆ. ಭಾರತದ ಭವಿಷ್ಯ ನಿಮ್ಮಂತಹ ಯುವಕರು ಮೇಲಿದೆ. ಹಾಗೆ ಪ್ರಸ್ತುತ ಮೊಬೈಲ್ ಬಳಕೆಯ ಪರಿಣಾಮವಾಗಿ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಯಾವುದೇ ಆನ್ ಲೈನ್ ಜಾಲಗಳ ಮೋಸಕ್ಕೆ ಒಳಗಾಗಬೇಡಿ. ಜಾಗೃತವಾಗಿರಿ. ಯಾಕೆಂದರೆ ನಿಮ್ಮ ಎಲ್ಲಾ ಡೇಟಾಗಳನ್ನು ಬೇರೆ ಬೇರೆ ನೆಲೆಯಲ್ಲಿ ಬಳಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತುಂಬಾ ಜಾಗೃತವಾಗಿರಬೇಕು. ನಿಮ್ಮ ಗಮನ ಏನಿದ್ದರು ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವಲ್ಲಿ ಇರಲಿ. ದೇಶಕ್ಕಾಗಿ ದೊಡ್ಡ ಕನಸು ಕಂಡು ದೇಶ ಸೇವೆ ಮಾಡಿ ಅದರಲ್ಲಿ ಬದುಕಿನ ಸಾರ್ಥಕತೆಯನ್ನು ಕಂಡುಕೊಳ್ಳಿರಿ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಹತ್ವಾರ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ರಾಮಚಂದ್ರ ಆಚಾರ್ಯ, ಎನ್.ಸಿ.ಸಿ ಅಧಿಕಾರಿ ಅಂಜನ್ ಕುಮಾರ್ ಎಂ.ಎಲ್, ಜೆಸಿಐ ಕುಂದಾಪುರ ಸಿಟಿ ಇದರ ಅಧ್ಯಕ್ಷರಾದ ಸಲೀಮ್, ಜೆಸಿಐ ಸಪ್ತಾಹದ ಸಭಾಪತಿ ರಾಘವೇಂದ್ರ ಚರಣ ನಾವಡ, ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.

    ಜೆಸಿಐ ಕುಂದಾಪುರ ಸಿಟಿ ಇದರ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿನಿ ಅಶ್ವಿನಿ ಕಾರಂತ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ವಿದ್ಯಾರಾಣಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    12 + 16 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.