ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು.
ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರ ಗ್ರಾಹಕರಾದ ಸಂತೋಷ್ ಕುಂದೇಶ್ವರ್ ಅವರ ಛಾಯಾಚಿತ್ರ ಪ್ರದರ್ಶನಗೊಂಡಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.

ಇದೇ ಸಂದರ್ಭದಲ್ಲಿ ಅವರ 30ಕ್ಕೂ ಹೆಚ್ಚಿನ ಪ್ರಶಸ್ತಿ ಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಗೊಂಡಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಕರ್ನಾಟಕ ದಿನಪತ್ರಿಕೆಯ ಹಿರಿಯ ಸಂಪಾದಕರಾದ ಜಾನ್ ಡಿಸೋಜ ಅವರು ಮಾತನಾಡಿ, ಫೋಟೋಗ್ರಾಫಿ ಕುರಿತ ಆಸಕ್ತಿ ಮತ್ತು ಅನುಭವವನ್ನು ಹಂಚಿಕೊಂಡರು. ಅಂತರಾಷ್ಟ್ರೀಯ ಮಟ್ಟದಲ್ಲಿ ವನ್ಯಜೀವಿ ಛಾಯಾಚಿತ್ರ ಗ್ರಹಣದಲ್ಲಿ ಸಾಕಷ್ಟು ಹೆಸರುಗಳಿಸಿದ ಸಂತೋಷ್ ಕುಂದೆಶ್ವರ್ ಅವರ ಗುರುತಿಸುವಿಕೆ ಮತ್ತು ಛಾಯಾಚಿತ್ರ ಪ್ರದರ್ಶನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದ ಅವರು ಮುಂದೆಯೂ ಇಂತಹ ಸಾಕಷ್ಟು ವಿಭಿನ್ನ ಕಾರ್ಯಕ್ರಮ ಮೂಡಿ ಬರಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ವಿಭಿನ್ನ ವೇದಿಕೆಯನ್ನ ಒದಗಿಸಿ ಪ್ರತಿಭೆಯನ್ನ ಪೋಷಿಸುತ್ತಿರುವದರ ಕುರಿತು ಹರ್ಷ ವ್ಯಕ್ತಪಡಿಸಿದರು. ಐ.ಎಂ.ಜೆ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್. ಕುಂದಾಪುರ ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ, ಸಂತೋಷ್ ಕುಂದೇಶ್ವರ್ ಅವರ ಪತ್ನಿ ಡಾ. ರಜತ ಕುಂದೇಶ್ವರ್, ಕ್ಲಬ್ ನ ಸಂಯೋಜಕರಾದ ಜಯಶೀಲ್ ಕುಮಾರ್ ಮತ್ತು ಜಿತೇಶ್ ಕುಮಾರ್ ಎ. ಎಚ್. ಪ್ರಶಸ್ತಿ ವಿಜೇತ ಛಾಯಾಚಿತ್ರಗ್ರಾಹಕರಾದ ಅಮೃತ್ ಬೀಜಾಡಿ, ದಿನೇಶ್ ಅಮಿನ್, ನಾಗೇಶ್, ಜಾವೆದ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತೃತೀಯ ಬಿಸಿಎ ವಿದ್ಯಾರ್ಥಿನಿ ನವ್ಯ ಕಾರ್ಯಕ್ರಮ ನಿರ್ವಹಿಸಿದರು.















