ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೈಂದೂರು ವಲಯ ಇವರ ವತಿಯಿಂದ ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ ಇವರ ಸಹಕಾರದಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ ಜರುಗಿತು.
ಉಪ್ಪುಂದ ಚಂದ್ರಶೇಖರ್ ಹೊಳ್ಳ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಾಚ್ಯ ವಸ್ತುಗಳ ಬಗ್ಗೆ ಅರಿವು ಮೂಡಿಸಬೇಕಾದದ್ದು ನಮ್ಮೆಲ್ಲರ ಹೊಣೆಯಾಗಿದೆ. ಆ ಮೂಲಕ ನಮ್ಮ ಸಂಸ್ಕೃತಿಯ ಪರಿಚಯವನ್ನು ಮಾಡುವುದು ಅಗತ್ಯವಾಗಿದೆ ಎಂದರು.

ಸಭಾ ಅಧ್ಯಕ್ಷತೆಯನ್ನು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಉದಯ್ ಕುಮಾರ್, ಬೈಂದೂರು ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಗಿರೀಶ್ ಶಾನುಭಾಗ್, ಬೈಂದೂರು ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ, ಹೆಮ್ಮಾಡಿ ಶಿಕ್ಷಣ ಸಂಯೋಜಕರಾದ ಯೋಗಿಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ದೇವಾಡಿಗ, ಮಂಜುನಾಥ ದೇವಾಡಿಗ, ರಾಧಿಕಾ ಬಿಐಆರ್‌ಟಿ, ನಾಗರತ್ನ ಉಪಸ್ಥಿತರಿದ್ದರು.
ಕುಂದಾ ಅಧ್ಯಯನ ಕೇಂದ್ರದ ಸಂಚಾಲಕರಾದ ಗಣಪತಿ ಹೋಬಳಿದಾರ್ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ ಕಾರ್ಯಕ್ರಮ ನಿರೂಪಿಸಿದರು.
ಬೈಂದೂರು ವಲಯದ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಾಚ್ಯ ಪ್ರಜ್ಞೆ ಕುರಿತ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.















