ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುಂದಾಪುರ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿತು. ಈ ವೇಳೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಕಾರ್ಯಾಧ್ಯಕ್ಷರಾಗಿ ಶ್ರೀನಿವಾಸ ಕೆ. ಅವರು ಅವಿರೋಧವಾಗಿ ಆಯ್ಕೆಯಾದರು. ಅವರು ಹೆಬ್ರಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮಹಾಸಂಘದ ಅಧ್ಯಕ್ಷರಾಗಿ ಎಚ್.ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪಿ. ಎಸ್ ಅವರು ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ನಾಗರಾಜ ಕಾಮಧೇನು, ಸೀತಾರಾಮಹಳದಿಪುರ, ಮಂಜುನಾಥ ಕೆ.ಎನ್., ವಾಮನ ರಾವ್ ಬೇಕಲ್, ಬಿ.ಎಂ.ನಾಥ್, ಕಾರ್ಯದರ್ಶಿಗಳಾಗಿ ಷಣ್ಮುಕ, ಡಿ. ಸತೀಶ್, ಅಣ್ಣಪ್ಪ ನಾಯ್ಕ್, ಗಣಪತಿ ಹೋಬಳಿದಾರ್, ರಶ್ಮಿರಾಜ್ ಕುಂದಾಪುರ, ಕೋಶಾಧಿಕಾರಿಯಾಗಿ ಕರುಣಾಕರ ಯು, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪಿ. ನಾಯ್ಕ್, ಅನಿಲ್ ಹೊಸನಗರ, ಪದ್ಮನಾಭ ಕೊತ್ವಾಲ್, ಮಂಜುನಾಥ ಎನ್, ಲೆಕ್ಕ ಪರಿಶೋಧಕರಾಗಿ ಗಣಪತಿ ಎನ್. ಶೇರುಗಾರ್, ಕಾನೂನುಸಲಹೆಗಾರರಾಗಿ ಹೂವಯ್ಯ ಶೇರುಗಾರ್, ಸಂಪಾದಕರುಗಳಾಗಿ ರೇಖಾಸುದೇಶ್ ಆಯ್ಕೆಯಾಗಿದ್ದಾರೆ. ಒಟ್ಟು 45 ಮಂದಿ ಕಾರ್ಯಕಾರಿ ಮಂಡಳಿಗೆ ನೇಮಕಗೊಂಡಿದ್ದಾರೆ.











1 Comment
Pingback: ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷರಾಗಿ ಎಚ್.ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪ