ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಭಾಷೆಯೆನ್ನುವುದು ಬರಿ ಕಲಿಕೆಯಲ್ಲ ಅದೊಂದು ಸಂವಹನ ಮಾಧ್ಯಮ ಈ ದಿಸೆಯಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆ ಪ್ರಯುಕ್ತ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣದಲ್ಲಿ ಹಿಂದಿ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಯಿತು.
ಉತ್ತಮವಾದ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ಹಾಗೂ ಆಡಳಿತ ಮಂಡಳಿಯವರು ಹಾಗೂ ಶಾಲಾ ಸಂಸತ್ತಿನ ಸದಸ್ಯರಾದ ವಿದ್ಯಾರ್ಥಿಗಳು ದೀಪಾರಾದನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಹಿಂದಿ ಭಾಷೆಯ ಮಹತ್ವವನ್ನು ಸಾರುವ ವಿವಿಧ ರೀತಿಯ ನಾಟಕ ನೃತ್ಯ ಪ್ರಹಸನಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಅರ್ಥಪೂರ್ಣವಾದ ಮೆರುಗನ್ನು ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಹಿಂದಿ ಭಾಷಾ ಶಿಕ್ಷಕಿ ನಯನ ಕಾಮತ್ ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸುವುದರೊಂದಿಗೆ, ಮಕ್ಕಳ ಹಿಂದಿ ಸಂವಹನವನ್ನು ಗುರುತಿಸಿ ಪ್ರಶಂಸಿಸಿದರು. ಬರಿ ಭಾಷೆಗಳಷ್ಟೇ ಜೀವನವಲ್ಲ ಬದಲಾಗಿ ಭಾಷೆಯ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿದರು. ಹಾಗೂ ತಾವು ಸೇವೆ ಸಲ್ಲಿಸಿದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ಕನ ಶೈಕ್ಷಣಿಕ ಪ್ರಗತಿಯಕುರಿತಾಗಿ ಮೆಚ್ಚುಗೆಯ ಮಾತುಗಳನ್ನು ಆಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಆಡಳಿತ ಮಂಡಳಿಯವರಾದ ಕುಮಾರಿ ಶಮಿತಾ ರಾವ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕನ್ನಡ ,ಇಂಗ್ಲಿಷ್ ಭಾಷೆಗಳಂತೆ ಹಿಂದಿ ಭಾಷೆಯ ಕಲಿಕೆಯು ಕೂಡ ಅಗತ್ಯ , ಪ್ರತಿಯೊಂದು ಭಾಷೆಯ ಕಲಿಕೆಯು ಕೂಡ ನಮ್ಮ ಜೀವನದಲ್ಲಿ ಅತ್ಯಂತ ಮಹತ್ವದ್ದು ಎಂಬುದನ್ನು ತಿಳಿಸಿದರು.ಜೊತೆಗೆ ತಮ್ಮ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ನಯನ ಮೇಡಮ್ ರವರ ಬೋಧನೆಯ ಕುರಿತು ಮೆಚ್ಚುಗೆಯನ್ನ ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ಪ್ರೀತಿಗೆ ಸ್ಮರಣಿಕೆ ನೀಡಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೊರ್ವ ಆಡಳಿತ ಮಂಡಳಿಯವರಾದ ರೆನಿಟಾಲೋಬೋ ಅವರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದಿ ಭಾಷಾ ಶಿಕ್ಷಕರಾದ ಮಾರುತಿ ಸರ್ ಹಾಗೂ ಜಿನ್ಶಾ ಮೇಡಂ ರವರ ಮಾರ್ಗದರ್ಶನದಲ್ಲಿ 9ನೇತರಗತಿಯ ವಿದ್ಯಾರ್ಥಿನಿಯಾದ ವರ್ಷ ಅಲ್ಸೆ ಯ ಸುಂದರವಾದ ನಿರೂಪಣೆಯೊಂದಿಗೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿ ಬಂದಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರೋತ್ಸಾಹವು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.















