ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ನಡೆದ ಬ್ಲಾಕ್ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










