Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿದಾರರು LE-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು  ಮುಂಚಿತವಾಗಿ AE-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

    ಸ್ಫೋಟಕ ಕಾಯಿದೆ ಮತ್ತು ನಿಯಮ 2008 ರ ಶೆಡ್ಯೂಲ್-IV ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಅಥವಾ ಆನ್‌ಲೈನ್ LSDA Portalನಲ್ಲಿ ಪಡೆದು ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ 300 ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ 600 ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ AE-5 ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾಪಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ.ಸ್ಟಾಂಪ್ ಪೇಪರ್), ಸರಕಾರ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.

    ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರಗಳನ್ನು AE-5 ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ, ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. LSDA Portalನ ನಮೂನೆಯಲ್ಲಿರುವ ಎಲ್ಲಾ ಕಲಂಗಳನ್ನು ವಿವರದೊಂದಿಗೆ ಭರ್ತಿ ಮಾಡಬೇಕು.

    Click here

    Click here

    Click here

    Call us

    Call us

    ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿದ್ದು, ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ದಿ ಎಕ್ಸ್ಪ್ಲೋಸಿವ್ ಆಕ್ಟ್ 1884 ಸೆಕ್ಷನ್ 84ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ 2008 ಕಾಯಿದೆ/ ನಿಯಮಾವಳಿಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    eighteen + 6 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.