ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhuservices.karnataka.gov.in/ ಮೂಲಕ ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 25 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಿದ ಬಳಿಕ ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.










