Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ‘ಪ್ರೊವಿನಿಯೋ 2.0’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ
    alvas nudisiri

    ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ‘ಪ್ರೊವಿನಿಯೋ 2.0’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪಥಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ. ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

    ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ  ವಿಷಯವನ್ನು ಪರಿಚಯಿಸಿರುವುದು ಉತ್ತಮ ನಿರ್ಧಾರ. ಇದರಿಂದ ಹೋಮಿಯೋಪಥಿ ವಿದ್ಯಾರ್ಥಿಗಳಿಗೆ ಹೋಮಿಯೋಪಥಿಯನ್ನು ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಲು, ಸಂಶೋಧನೆ ನಡೆಸಲು ಮತ್ತು ಲೇಖನಗಳನ್ನು ಪ್ರಕಟಿಸಲು ಸಹಾಯವಾಗುತ್ತದೆ. ಹೋಮಿಯೋಪಥಿಯಲ್ಲಿ ವೈಜ್ಞಾನಿಕವಾಗಿ ಸಾಬೀತಾದ ಅಧ್ಯಯನಗಳು ಮತ್ತು ಅವುಗಳ ಪ್ರಕಟಣೆಗಳಿಲ್ಲದೆ, ಅದಕ್ಕೆ ತಕ್ಕ ಮಾನ್ಯತೆ ಸಿಗುವುದಿಲ್ಲ.

    ಹೋಮಿಯೋಪಥಿಗೆ 250 ವರ್ಷಗಳ ಇತಿಹಾಸವಿದ್ದರೂ, ಅದನ್ನು ವಿಜ್ಞಾನವೆಂದು ಸ್ವೀಕರಿಸುವಲ್ಲಿ ಇನ್ನೂ ಅಡೆತಡೆಗಳಿವೆ. ವೈಜ್ಞಾನಿಕ ಅಧ್ಯಯನಗಳ ಚರ್ಚೆ ಇನ್ನಷ್ಟು ವಿಚಾರ ಸಂಕಿರಣಗಳಲ್ಲಿ ನಡೆಯಬೇಕು ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಭಾರತ ಅತ್ಯಂತ ಶ್ರೀಮಂತ ಮಾನವ ಸಂಪನ್ಮೂಲ ಹೊಂದಿದ ದೇಶ. ಈ ಸಂಪನ್ಮೂಲದ ಆರೋಗ್ಯಕ್ಕೆ ಎದುರಾಗುವ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ವೈದ್ಯಕೀಯ ಕ್ಷೇತ್ರಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ.

    Click here

    Click here

    Click here

    Call us

    Call us

    ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಜನರ ಜೀವಿತದ ಸರಾಸರಿ ವರ್ಷಗಳು ಹೆಚ್ಚಾಗಿದೆ. ಜನರು ಮೂಢನಂಬಿಕೆಗಳಿಗೆ ಬಲಿಯಾಗದೆ, ವೈಜ್ಞಾನಿಕ ಮನೋಧರ್ಮದ ಮೂಲಕ ಹೋಮಿಯೋಪತಿಯನ್ನು ಬೆಳೆಸಿ ಎಂದು ಕರೆ ನೀಡಿದರು.

    ಎರಡು ದಿನ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಹೋಮಿಯೋಪಥಿ ಕ್ಷೇತ್ರದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ಸಂಶೋಧಕರಿಂದ ಪೇಪರ್ ಪ್ರೆಸೆಂಟೇಷನ್ ಇರಲಿವೆ.

    ಕಾರ್ಯಕ್ರಮದಲ್ಲಿ ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಮೆಡಿಕಲ್ ಕ್ಯಾಂಪ್ ಗಳಿಗೆ ಸಹಕಾರ ನೀಡಿದ  ಮೂಡುಬಿದಿರೆಯ ವಿವಿಧ ಸಮಾಜ ಸೇವಕರಾದ ಅಮರ್ ಕೋಟೆ, ಪುತ್ತಿಗೆ ಸೋಮನಾಥೇಶ್ವರ ದೇವಾಲಯದ ಅರ್ಚಕ ಅಡಿಗಲ್ ಅನಂತಕೃಷ್ಣ ಭಟ್, ಅಕ್ಷಯ್ ಜೈನ್, ಭಾರವಿ ಹಾಗೂ ಧರಮೆಂದ್ರ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಕೆ.,ಕಾಲೇಜಿನ ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ರೋಷನ್ ಪಿಂಟೋ, ಕಾರ್ಯಕ್ರಮ ಸಂಯೋಜಕಿ ಡಾ. ವಸುಮತಿ ಕೋಡಿಕಲ್ ಉಪಸ್ಥಿತರಿದ್ದರು.

    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    fourteen − seven =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.