Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಜನರು ಮಾದಕ ವಸ್ತುಗಳ ಬಳಕೆಯಿಂದ ದೂರವಿರುವಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಯುವಜನರು ಮಾದಕ ವಸ್ತುಗಳ ಬಳಕೆಯಿಂದ ದೂರವಿರುವಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಾದಕ ವಸ್ತುಗಳ ಸೇವನೆಯು ಯುವಜನರ ಭವಿಷ್ಯದ ಜೀವನವನ್ನು ಹಾಳುಮಾಡುತ್ತದೆ. ಮಾದಕ ವ್ಯಸನಕ್ಕೆ ಒಳಗಾದ ಯುವಕರು ಅದರಿಂದ ಹೊರಬಂದು ಕ್ರಮಬದ್ಧ ಶಿಸ್ತು ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಶಿಕ್ಷಣದಿಂದ ವಂಚಿತರಾಗುವುದರೊAದಿಗೆ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗದಂತೆ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲು ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

    ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿ.ಸಿ.ಟಿ.ವಿ ಆಳವಡಿಸಿರುವ ಬಗ್ಗೆ ನಿಯಮಿತವಾಗಿ ಪರಿಶೀಲಿಸಬೇಕು. ಅಂಚೆ ಇಲಾಖೆಯ ಅಧಿಕಾರಿಗಳು ಹೊರ ದೇಶಗಳಿಂದ ಬರುವ ಪಾರ್ಸೆಲ್ ಹಾಗೂ ಕೊರಿಯರ್‌ಗಳ ಮೇಲೆ ನಿಗಾ ಇರಿಸಿ ಸಂಶಯಾಸ್ಪದ ಅಂಚೆಪತ್ರಗಳು ಕಂಡುಬಂದಲ್ಲಿ ಕೂಡಲೇ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

       ಜಿಲ್ಲೆಯಲ್ಲಿ 80,669 ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ನೋಂದಣಿಯಾಗಿದೆ. ಕಾರ್ಮಿಕರಿಗೆ ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸಭೆ ಮತ್ತು ಕಾರ್ಯಾಗಾರಗಳನ್ನು ನಡೆಸಿ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಉತ್ತರ ಭಾರತದಿಂದ ಹೆಚ್ಚಾಗಿ ಕೂಲಿ ಕಾರ್ಮಿಕರು ಜಿಲ್ಲೆಗೆ ರೈಲುಗಳ ಮೂಲಕ ಆಗಮಿಸುತ್ತಾರೆ. ರೈಲ್ವೆ ಪೊಲೀಸ್ ಅಧಿಕಾರಿಗಳು ಮಾದಕ ವಸ್ತುಗಳ ಸಾಗಾಟ ನಡೆಸುವ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂತಹವರನ್ನು ತಪಾಸಣೆಗೊಳಪಡಿಸಬೇಕು ಎಂದರು.

    ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೆನ್ ಪೊಲೀಸ್ ಸಹಯೋಗದಲ್ಲಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸಿದ್ಧ ಆಹಾರ ಪದಾರ್ಥಗಳ ತಪಾಸಣೆಯನ್ನು ಅಗಿಂದಾಗ್ಗೆ ನಡೆಸಿ, ಮಾದರಿಗಳನ್ನು ಪ್ರಯೋಗ ಶಾಲಾ ವಿಶ್ಲೇಷಣೆಗೆ ಕಳುಹಿಸುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

    ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಯುವಜನತೆ ಮಾದಕ ದ್ರವ್ಯ ಸೇವನೆಗೆ ಬಲಿಯಾಗಿ ಜೀವನ ಹಾಳು ಮಾಡದಂತೆ ತಡೆಯುವ ನಿಟ್ಟಿನಲ್ಲಿ ಅನಾಮಧೇಯ ವರದಿ ಮಾಡುವಿಕೆಗಾಗಿ ಕ್ಯೂಆರ್ ಕೋಡ್ ಅನ್ನು ಹೊರತರಲಾಗಿದ್ದು ಇದನ್ನು ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ / ಸೇವನೆ ಕಂಡುಬಂದಲ್ಲಿ ಈ ಕ್ಯೂಆರ್ ಕೋಡ್ ಅನ್ನು ಸ್ಕಾಂಯನ್ ಮಾಡಿ ಗೌಪ್ಯವಾಗಿ ಮಾಹಿತಿ ಹಂಚಿಕೊಳ್ಳಬಹುದು. ಈಗಾಗಲೇ ಇದಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶೈಕ್ಷಣಿಕ ಸಂಸ್ಥೆಗಳಲ್ಲಿ ಇದನ್ನು ಹೆಚ್ಚು ಪ್ರಚುರಪಡಿಸಬೇಕು ಎಂದರು.

    ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    5 × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.