ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಅವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.










