ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಸೆ.22: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು.



ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ವೇಳೆ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.










