Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    Updated:25/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗಧಿಪಡಿಸಲಾಗಿದ್ದು, ಉಡುಪಿ ಹಾಗೂ ಕಾರ್ಕಳದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

    ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಯನ್ವಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಖರೀದಿಸುವಂತೆ ಸೂಚಿಸಿದರು.

    ಖರೀದಿಯಾಗುವ ಭತ್ತವನ್ನು ಗೋದಾಮುಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲು ಅಗತ್ಯ ಕ್ರಮ ವಹಿಸಬೇಕು. ಭತ್ತ ಖರೀದಿ ನೋಂದಣಿ ಪ್ರಾರಂಭವಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಭತ್ತವನ್ನು ಸರಬರಾಜು ಮಾಡುವ ರೈತರ ಬ್ಯಾಂಕ್‌ಗಳಿಗೆ ಹಣವನ್ನು ಡಿ.ಬಿ.ಟಿ ನೇರ ನಗದು ವರ್ಗಾವಣೆ ಮಾಡಲು ಕ್ರಮವಹಿಸಬೇಕು ಎಂದ ಅವರು, ಪ್ರತೀ ರೈತರಿಂದ ಪ್ರತೀ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 50 ಕ್ವಿ. ಖರೀದಿಸಲಾಗುವುದು ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕದ್ರೋಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು ಎಂ.ಎಸ್. ಆಹಾರ ಇಲಾಖೆಯ ಉಪನಿರ್ದೇಶಕಿ ರಶ್ಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    13 − 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.