ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಿಲ್ಲಿಯ ಪ್ರತಿಷ್ಠಿತ ಡಿ.ಕೆ. ಪೆಜೆನ್ಸ್ ಸಂಸ್ಥೆ ಆಯೋಜಿಸಿದ್ದ ‘ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025’ ಕಿರೀಟವು ಕುಂದಾಪುರದ ನಿಶಾಲಿ ಕುಂದರ್ ಮುಡಿಗೇರಿದೆ.
ದಿಲ್ಲಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಇತ್ತೀಚಿಗೆ ನಡೆದ ಸ್ಪರ್ಧೆಯಲ್ಲಿ ದೇಶದ ನಾನಾ ಭಾಗಗಳಿಂದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಂದಿದ್ದ 44 ಸ್ಪರ್ಧಿಗಳನ್ನು ಎದುರಿಸಿ ನಿಶಾಲಿ ಈ ಪ್ರತಿಷ್ಠಿತ ಟೈಟಲ್‌ಗಳನ್ನು ಮುಡಿಗೇರಿಸುವ ಮೂಲಕ ರಾಜ್ಯಕ್ಕೆ ಹುಟ್ಟೂರಿನಲ್ಲಿ ಕೀರ್ತಿ ತಂದಿದ್ದಾರೆ.
ಅವರು ಕಳೆದ 6 ತಿಂಗಳಿನಿಂದ ಈ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದರು. ಟ್ಯಾಲೆಂಟ್ ಸುತ್ತಿನಲ್ಲಿ ಈ ನೆಲದ ಹೆಮ್ಮೆಯ ಯಕ್ಷಗಾನ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.
ನಜ್ಮೀ ಸಯೀದ್ ಹಾಗೂ ಡಾ. ಜಿಮ್ಮಿ ಗರಿಮಾ ಅವರು ನಿಶಾಲಿಗೆ ಫೈಡ್ ಆಫ್ ಇಂಡಿಯಾ-ಮಿಸ್ ಇಂಡಿಯಾ 2025ರ ಕಿರೀಟವನ್ನು ತೊಡಿಸಿದರು. ಡಾ. ಜಿಮ್ಮಿ ಗರಿಮಾ ಅವರ ಸಂಯೋಜನೆಯ ಈ ಸ್ಪರ್ಧೆಯ ಗ್ರಾಂಡ್ ಜ್ಯೂರಿಗಳಾದ ಮಾರ್ಗರೆಟ್ ಚೊರೆಯಿ, ನಜ್ಮೀ ಸಯೀದ್, ಸೋನಲ್ ಗೋಸಾಲಿಯಾ ಹಾಗೂ ಮನೀಷಾ ಸುಬ್ಬಾ ಉಪಸ್ಥಿತರಿದ್ದರು.
ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಎಂ.ಎ. ಜರ್ನಲಿಸಂ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾಲಿ, ಬೆಂಗಳೂರಿನ ಶ್ರೀನಿಧಿ ಕಾರ್ಪೊರೇಷನ್ ಸಂಸ್ಥೆಯ ಆಡಳಿತ ನಿರ್ದೇಶಕರು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಕುಂದರ್ ಮತ್ತು ಜಾನಕಿ ಅವರ ಪುತ್ರಿ. ಕುಂದಾಪುರದ ಬರೆಕಟ್ಟು ನಿಂದ ದಿಲ್ಲಿಯವರೆಗಿನ ಈ ಪಯಣವು ನನ್ನ ಜೀವಮಾನದ ಕನಸನ್ನು ನನಸಾಗಿಸಿದೆ ಕೊಂಡಿದ್ದಾರೆ ಎಂದು ನಿಶಾಲಿ ಸಂತಸ ಹಂಚಿಕೊಂಡಿದ್ದಾರೆ.















