ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಈ ಮೂಲಕ ಪ್ರತಿಭಾನ್ವೇಷಣೆಯೊಂದಿಗೆ ಪ್ರತಿಭೆ ಅನಾವರಣಕ್ಕೆ ಸಹಕಾರಿ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.
ಅವರು ಬುಧವಾರ ಕಾಲೇಜು ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ, ಗೀತಾನಂದ ಫೌಂಡೇಶನ್ ವತಿಯಿಂದ ಸ್ಥಳೀಯ ಪದವಿ ಪೂರ್ವ ಕಾಲೇಜಿನಿಂದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶುಲ್ಕ ವಿತರಣೆ ಮತ್ತು ಪ್ರತಿಭಾನ್ವೇಷಣೆ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಆದರೆ ಅದನ್ನು ಸಮನಾಗಿ ಸ್ವೀಕರಿಸಿದಾಗ ಯಶಸ್ಸಿನ ಮಟ್ಟಿಲು ಏರಲು ಸಾಧ್ಯ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಖಾರ ಎಂಬ ಪದ ಬಾಯಿಯನ್ನು ಸುಡಬಲ್ಲದು ಆದರೆ ಅಹಂಕಾರ ದೇಗವನ್ನು ಸುಡಲ್ಪಡುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳ ತಮ್ಮ ಸರಳತೆ ಸನ್ಮಾರ್ಗ ದಾರಿಯಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು. ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳು ವ್ಯಸನಕ್ಕೆ ತುತ್ತಾಗುತ್ತಿದ್ದು ಅದರಿಂದ ಹೊರಬಂದು ಭಗವಂತ ಭುವಿಗಳಿಸಿದ ಅತ್ಯಂತ ಸುಂದರ ಜೀವವನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಚಕ್ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಮಣೂರು-ಪಡುಕರೆ ಇದರ ಪ್ರಾಂಶುಪಾಲ ಕೆ .ಡೆನಿಸ್ ಬಾಂಜಿ, ಐ.ಕ್ಯೂ.ಎ.ಸಿ. ಸಂಚಾಲಕ ಸುಬ್ರಮಣ್ಯ ಎ., ಉದ್ಯಮಿ ಮಹೇಶ್ ಪೂಜಾರಿ ಮಣೂರು ಪಡುಕರೆ, ಸಾಂಸ್ಕೃತಿಕ ಸಂಚಾಲಕರಾದ ಡಾ. ಶಂಕರ್ ನಾಯ್ಕ್, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಕೋಡಿ, ವಿದ್ಯಾರ್ಥಿ ಮುಖಂಡರುಗಳಾದ ತ್ರಿಷಾ ತೃತೀಯ ಬಿ.ಕಾಂ. ಸಾಗರ್ ತೃತೀಯ ಬಿ.ಎ., ಸುಪ್ರೀತಾ ತೃತೀಯ ಬಿ.ಎ., ಸೃಷ್ಟಿ ಚಂದನ್, ಶ್ರದ್ಧಾ ತೃತೀಯ ಬಿ.ಕಾಂ., ಆಕಾಶ್ ತೃತೀಯ ಬಿ.ಕಾಂ. ಉಪಸ್ಥಿತರಿದ್ದರು.
ಕಾಲೇಜು ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಬೋಧಕ-ಬೋಧಕೇತರ ವೃಂದ, ಹಾಗೂ ಸಮಸ್ತ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು. ಉಪನ್ಯಾಸಕಿ ರಶ್ಮಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ ಆಚಾರ್ ಸ್ವಾಗತಿಸಿದರು.
ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸ್ಪರ್ಧಾಕಾರ್ಯಕ್ರಮ ಜರಗಿತು.















