Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಕಾಲು ಜಾರಿ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವು
    ಊರ್ಮನೆ ಸಮಾಚಾರ

    ಕೋಟ: ಕಾಲು ಜಾರಿ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ತೆಂಗಿನ ತೋಟದಲ್ಲಿ ಕಾಯಿ‌ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ಸಂಭವಿಸಿದೆ.

    Click Here

    Call us

    Click Here

    ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತ ದುರ್ದೈವಿ. ಈತ ಸಹೋದರಿ, ತಾಯಿಯನ್ನು ಅಗಲಿದ್ದಾನೆ.

    ಅವನು ಬುಧವಾರ ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಹಾಗೂ ಎಲ್ಲ ಕಡೆ ಹುಡಯಕಿದರು ಪತ್ತೆಯಾಗಿರಲಿಲ್ಲ. ಅನಂತರ ಗುರುವಾರ ಅಪರಾಹ್ನ ಕೈಲೇರಿ ಸಮೀಪ ತೋಡಿನಲ್ಲಿ ಈತನ ಶವ ಪತ್ತೆಯಾಗಿದೆ.

    ಬುಧವಾರ ವಿಫರೀತ ಮಳೆ ಇದ್ದ ಕಾರಣ ತೋಡು ತುಂಬಿ ಹರಿಯುತ್ತಿತ್ತು. ಈ ಭಾಗದಲ್ಲಿ ರಸ್ತೆ ಕೂಡ ಮಳೆಯಿಂದ ಕೆಸರುಮಯವಾಗಿದ್ದು ಸಂಚರಿಸಲು ಅಸಾಧ್ಯ ಸ್ಥಿತಿ ಇದೆ. ಹೀಗಾಗಿ ಕಾಯಿ ಕೊಯ್ದು ಟೆಂಪೋಗೆ ಸಾಗಿಸುತ್ತಿದ್ದ ಶರತ್ ಕಾಲು ಜಾರಿ ತೋಡಿಗೆ ಬಿದ್ದಿದ್ದು ಯಾರೂ ಗಮನಿಸದೆ ಮುಳುಗಿ ಮೃತಪಟ್ಟಿದ್ದಾನೆ.

    ಕೆಲಸ ಮಾಡುತ್ತಿದ್ದ ಸ್ಥಳದ ಪಕ್ಕದಲ್ಲೇ ಹೊಳೆ ಇದ್ದ ಕಾರಣ ಹೊಳೆಗೆ ಬಿದ್ದಿರಬಹುದು ಎಂದು ಅಂದಾಜಿಸಿ ಬುಧವಾರ ರಾತ್ರಿ ತನಕ ಹಾಗೂ ಗುರುವಾರ ಶವ ದೊರೆಯುವ ತನಕ ಹೊಳೆಯಲ್ಲಿ ವ್ಯಾಪಕ ಶೋಧ ನಡೆಸಲಾಯಿತು. ಈಶ್ವರ ಮಲ್ಪೆ ಅವರು ಹಾಗೂ ಅಗ್ನಿಶಾಮಕ ತಂಡ ಸಾಕಷ್ಟು ಪ್ರಯತ್ನಪಟ್ಟಿದ್ದರು.‌ ನಾಗರಾಜ್ ಜೀವನ್ ಮಿತ್ರ ಹಾಗೂ ಸ್ಥಳೀಯರು ಅವರಿಗೆ ಸಹಕಾರ ನೀಡಿದರು. ಗುರುವಾರ ಬೆಳಗ್ಗೆ ಕೂಡ ಇದೇ ತಂಡದಿಂದ ಶೋಧ ಮುಂದುವರಿದಿತ್ತು.

    Click here

    Click here

    Click here

    Click Here

    Call us

    Call us

    ಘಟನಾ ಸ್ಥಳಕ್ಕೆ ಕೋಟ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್, ಎ.ಎಸ್.ಐ. ರವಿ ಕುಮಾರ್ ಮತ್ತು ಸಿಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    12 + 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.