ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ವೇಳೆ ದೇವಿಯ ದರ್ಶನ ಪಡೆದು ಚಂಡಿಕಾ ಯಾಗದಲ್ಲಿ ಭಾಗಿಯಾದರು. ಅರ್ಚಕ ಸುಬ್ರಹ್ಮಣ್ಯ ಅಡಿಗ ಅವರ ಮಾರ್ಗದರ್ಶನದಲ್ಲಿ ಪೂಜೆ ಸಲ್ಲಿಸಿದರು. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ದಂಪತಿಗಳನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪ್ರಸಾದ ಗೌರವಿಸಿದರು.
ಕಾಂತಾರ ಚಾಪ್ಟರ್ – 1 ಟ್ರೇಲರ್ ಬಿಡುಗಡೆಯ ಮರುದಿನವೇ ನವರಾತ್ರಿ ಅಂಗವಾಗಿ ರಿಷಬ್ ದಂಪತಿಗಳು ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕೆರಾಡಿಯವರಾದ ರಿಷಬ್ ಅವರು ನಿರ್ದೇಶಿಸಿ ನಟಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ – 1 ಸಿನಿಮಾ ಅಕ್ಟೋಬರ್ 02ರಂದು ಬಿಡುಗಡೆಗೊಳ್ಳಲಿದ್ದು, ಚಿತ್ರತಂಡ ಅದರ ತಯಾರಿಯಲ್ಲಿಯೇ ಇದೆ. ಈ ನಡುವೆ ಪತ್ನಿಯ ಹರಕೆ ತೀರಿಸಲು ರಿಷಬ್ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.










