ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನದ ಅಂಗವಾಗಿ ಬೈಂದೂರು ವಲಯ ಅರಣ್ಯ ಇಲಾಖೆ ನೇತೃತ್ವದಲ್ಲಿ ರೋಟರಿ ಕ್ಲಬ್ ಬೈಂದೂರು, ಕ್ಲೀನ್ ಕಿನಾರ ತಂಡ ಹಾಗೂ ಸರಕಾರಿ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಇಲ್ಲಿನ ಸೋಮೇಶ್ವರ ಕಡಲ ತೀರದಲ್ಲಿ ಭಾನುವಾರ ಕಡಲತೀರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.


ಬೀಚ್ ಸ್ವಚ್ಚತಾ ಕಾರ್ಯದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಕಡಲಾಮೆ, ಕಡಲಾಮೆ ಮೊಟ್ಟೆ ಸಂರಕ್ಷಣೆ ಹಾಗೂ ಇನ್ನಿತರ ಸಂರಕ್ಷಣ ಕಾರ್ಯದಲ್ಲಿ ತೊಡಗಿಕೊಂಡಿರುವ ಸ್ಥಳೀಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ವೇಳೆ ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ರೋಟರಿ ವಲಯ 1ರ ಸಹಾಯಕ ಗವರ್ನರ್ ಐ. ನಾರಾಯಣ್, ಬೈಂದೂರು ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ, ನಿವೃತ್ತ ಸೈನಿಕ ಚಂದ್ರಶೇಖರ ನಾವಡ, ಎನ್ಎಸ್ಎಸ್ ಘಟಕಾಧಿಕಾರಿ ನವೀನ್ ಹೆಚ್. ಜಿ., ಕ್ಲೀನ್ ಕಿನಾರ ತಂಡದ ರಾಘವೇಂದ್ರ ಪಡುವರಿ. ರೋಟರಿ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಸೇರಿದಂತೆ ಅರಣ್ಯ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.










