ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮೈಸೂರಿನ ದಸರಾ ಕಾರ್ಯಕ್ರಮದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್ ಬಿ. ಪೂಜಾರಿ ಭಾಗವಹಿಸಿ 90.ಕೆಜಿ ಬಲ ಕೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರ ಮೂಲಕ ಸತತ 4 ವರ್ಷ ಚಿನ್ನದ ಪದಕ ಮೂಡಿಗೆರಿಸಿಕೊಂಡಿದ್ದಾರೆ.
ಅವರು ಅಂತಾಷ್ಟ್ರೀಯ ಕ್ರೀಡಾ ಸ್ಪರ್ಧಿಯಾಗಿ ಭಾಗವಹಿಸಿ ಹಲವು ಪದಕಗಳನ್ನು ಪಡೆದುಕೊಂಡಿದ್ದಾರೆ.










