ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ವೈದ್ಯಕೀಯ ವಿಭಾಗ, ಮಾಹೆ ಮಣಿಪಾಲ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಶ್ರೀ ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ, ದೈವಜ್ಞ ಬ್ರಾಹ್ಮಣರ ಸಂಘ, ಶ್ರೀ ವೀರ ವಿಠಲ ದೇವಸ್ಥಾನ ಗಂಗೊಳ್ಳಿ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಶಿಬಿರವನ್ನು ಉದ್ಘಾಟಿಸಿದರು.

ಕೆಎಂಸಿ ಮಣಿಪಾಲದ ವೈದ್ಯಾಧಿಕಾರಿ ಡಾ. ಸಾಚಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಶಂಕರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಶ್ರೀ ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಗೌರವಾಧ್ಯಕ್ಷ ಕೆ. ಆರ್. ನಾಯ್ಕ್, ದೈವಜ್ಞ ಬ್ರಾಹ್ಮಣರ ಸಂಘದ ಕಾರ್ತಿಕ್ ಶೇಟ್ ಮೊದಲಾದವರು ಉಪಸ್ಥಿತರಿದ್ದರು.
ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಯಿನಾಥ್ ಶೇಟ್ ವಂದಿಸಿದರು. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರ ಸಿಬ್ಬಂದಿಗಳು ಚಂದ್ರಕಲಾ ತಾಂಡೇಲ ಕಾರ್ಯಕ್ರಮ ನಿರ್ವಹಿಸಿದರು.










