ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಉದ್ಘಾಟನಾ ಸಮಾರಂಭವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಭಾನುವಾರ ನೆರವೇರಿತು.
ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸುಮನ ಪಡಿಯಾರ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಸೇವೆಗಾಗಿ ಸಂಘಟಿತ ಪ್ರಯತ್ನವನ್ನು ಮಾಡುವುದು ಯಶಸ್ಸನ್ನು ಕೊಡುತ್ತದೆ. ಉತ್ತಮ ಕಾರ್ಯಗಳಿಗೆ ಬೆಂಬಲವನ್ನು ನೀಡುವುದು ಮತ್ತು ಆ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಬೆಂಗಳೂರಿನ ಹರಪನಹಳ್ಳಿ ಆನೇಕಲ್ ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಭಾಷಾ ಶಿಕ್ಷಕ ಮತ್ತು ಲೇಖಕ ಸಂದೇಶ್ ಹೆಚ್ ನಾಯ್ಕ್ ಹಕ್ಲಾಡಿ ಮತ್ತು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಪ್ರಮೋದ್ ಗಾಣಿಗ ಗಂಗೊಳ್ಳಿ ಶುಭ ಹಾರೈಸಿದರು.
ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಕಾಂತು ಬಾಬು ಖಾರ್ವಿ ಅವರು ಇತ್ತೀಚಿಗೆ ನಿಧನರಾದ ಖ್ಯಾತ ಸಾಹಿತಿ ಎಸ್. ಎಲ್. ಭೈರಪ್ಪ ಅವರಿಗೆ ನುಡಿ ನಮನಗಳನ್ನು ಸಲ್ಲಿಸಿದರು.
ಸಲಹೆಗಾರರಾದ ಡಾ. ವೀಣಾ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾನಿಕ ಪ್ರಾರ್ಥಿಸಿದರು. ಗೋಪಾಲ ಚಂದನ್ ಸಹಕರಿಸಿದರು. ಕೋಶಾಧಿಕಾರಿ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಉಪಾಧ್ಯಕ್ಷೆ ಮಮತಾ ಪೂಜಾರಿ ಸ್ವಾಗತಿಸಿದರು. ಮನೋಜ್ ಎನ್‌ಡಿ ಧನ್ಯವಾದ ಅರ್ಪಿಸಿದರು.
ಈ ಸಂದರ್ಭದಲ್ಲಿ ಐದು ಅದೃಷ್ಟಶಾಲಿ ಪ್ರೇಕ್ಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.















