Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಘಟಕಗಳನ್ನು ಕೂಡಲೇ ಸ್ಥಾಪಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಘಟಕಗಳನ್ನು ಕೂಡಲೇ ಸ್ಥಾಪಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ  ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿಯೊಳಗೆ ಪ್ರಾರಂಭಿಸಿರುವುದಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

    ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ನಿಟ್ಟೆಯಲ್ಲಿ 50.42 ಎಕ್ರೆ ಸೇರಿದಂತೆ ಒಟ್ಟು 165.98 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಕೆ.ಐ.ಎ.ಡಿ.ಬಿ ಅಭಿಯಂತರರುಗಳಿಗೆ ಸೂಚಿಸಿದ ಅವರು, ಹೊಸ ಕೈಗಾರಿಕೆ ಪ್ರದೇಶಗಳ ವಿಸ್ತರಣೆಗೆ ಎಲ್ಲೂರು ಹಾಗೂ ಸಾಂತೂರು 941.98 ಎಕ್ರೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.

    ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಭೂ ಸ್ವಾಧೀನ ಪ್ರಕ್ರಿಯೆ ಆದ್ಯತೆಯ ಮೇಲೆ ಕೈಗೊಂಡು ರಸ್ತೆ ಕಾಮಗಾರಿಯನ್ನು ಅಭಿವೃದ್ಧಿಪಡಿಸಬೇಕು ಎಂದ ಅವರು, ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆಯ ಕೈಗಾರಿಕಾ ಪ್ರದೇಶದಲ್ಲಿನ ನಿವೇಶನಗಳ ನಮೂನೆ 9/11 ದಾಖಲೆಗಳನ್ನು ಈಗಾಗಲೇ 16 ಘಟಕಗಳಿಗೆ ನೀಡಿದ್ದು, ಬಾಕಿ ಉಳಿದ 8 ಘಟಕಗಳಿಗೆ ಕೂಡಲೇ ಮಾಡಿಕೊಡುವ ಕಾರ್ಯಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾಡಿಕೊಡುವಂತೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಕೈಗಾರಿಕಾ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಅಳವಡಿಸಿರುವ 100 ಕೆ.ವಿ ವಿದ್ಯುತ್ ಪರಿವರ್ತಕವನ್ನು 250 ಕೆ.ವಿ ಗೆ ಹೆಚ್ಚಿಸುವ ಟ್ರಾನ್ಸ್ಫಾರ್ಮ್ ಅಳವಡಿಸುವ ಕಾರ್ಯವನ್ನು ಮುಂದಿನ ಒಂದುವಾರದ ಒಳಗೆ ಕೈಗೊಳ್ಳಬೇಕೆಂದು ಮೆಸ್ಕಾಂ ಇಲಾಖೆಯ ಅಭಿಯಂತರರುಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ರಫ್ತು ಉದ್ಯಮವನ್ನು ಉತ್ತೇಜಿಸಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ರಫ್ತನ್ನು ಹೆಚ್ಚಿಸಲು ಕ್ರಮವಹಿಸಬೇಕು ಎಂದ ಅವರು, ಮರೈನ್ ಪ್ರೋಡಕ್ಟ್ಗಳ ರಫ್ತಿಗೆ ಅವಶ್ಯಕತೆ ಇರುವ ಸಮಸ್ಯೆಗಳನ್ನು ಪರಿಹರಿಸಲು ಸೆಂಟ್ರಲೈಸ್ಡ್ ಸೀ ಫುಡ್ ಪಾರ್ಕ್ಗಳ ನಿರ್ಮಾಣ ಹಾಗೂ ಎಕ್ಸ್ಪೋರ್ಟ್ ಇನ್ಸ್ಪೆಕ್ಷನ್ ಏಜೆನ್ಸಿ ಗಳನ್ನು ಹೆಚ್ಚುವರಿಯಾಗಿ ನೇಮಿಸಲು ಕ್ರಮವಹಿಸಬೇಕು ಎಂದರು.

    ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6274 ಫಲಾನುಭವಿಗಳಿಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ. 3916 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3573 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದ ಅವರು ಈ ಯೋಜನೆಯಡಿ ಆಯ್ಕೆಯಾದವರಿಗೆ ಕೌಶಲ್ಯ ತರಬೇತಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನೀಡುವುದರ ಜೊತೆಗೆ ಬ್ಯಾಂಕ್‌ಗಳು ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು ಎಂದರು.

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಖಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.