ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಕಾಲೇಜಿನ ಉದ್ಯೋಗ ಮಾಹಿತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಐದು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಸೋಮವಾರ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ಸ್ಟೀವನ್ ಡಿಕೋಸ್ಟ್ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಸಂಸ್ಥೆಯ ಜಾಬೀಸ್, ಪೂಜಿತಾ, ಹಫೀಜ್ ಹಾಗೂ ಸಂತೋಷ್ ತರಬೇತಿ ನೀಡಿದರು.
ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಸ್ನಾತಕ ಪದವಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಮನೋಹರ್ ಬಿ. ಹಾಗೂ ಮ್ಯಾಜಿಕ್ ಬಸ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಭಾರ್ಗವ ಉಪಸ್ಥಿತರಿದ್ದರು.
ಎಂ.ಕಾಂ. ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮ ನಿರೂಪಿಸಿ, ಸ್ನಾತಕೋತ್ತರ ಪದವಿ ಉದ್ಯೋಗ ಕೋಶದ ಸಂಚಾಲಕ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿದರು.










