ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.










