ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ಪೀಳಿಗೆಯ ಮಕ್ಕಳಲ್ಲಿ ತಾಳ್ಮೆ ಕಡಿಮೆ. ಮೊಬೈಲ್ ಯುಗದಲ್ಲಿ ಮೊಬೈಲ್ ಬಿಟ್ಟು ಹೊರಬರುವ ತಾಳ್ಮೆ ಯಾರಲ್ಲೂ ಇಲ್ಲ. ಯಾವುದೇ ವಿಷಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ನಮಗೆ ಅದರ ಉತ್ತಮ ಅನುಭವ ದೊರೆಯುತ್ತದೆ ಎಂದು ಬಿಎಸ್ಸೆನ್ನೆಲ್ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ ಭಾಸ್ಕರ ಭಟ್ ಹೇಳಿದರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 17ನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತ್ರಾಸಿಯ ಮಿಲೇನಿಯಂ ಹಾಲ್‌ನಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ನಾವು ಏನಾಗಬೇಕು ಎಂಬುದರ ನಿರ್ಧಾರ ಮಾಡಿಕೊಳ್ಳಬೇಕು. ಮಿತ್ರತ್ವ, ಪ್ರೀತಿ ಬೆಳೆಸಿಕೊಳ್ಳಬೇಕು. ಮಕ್ಕಳು ಜೀವನದಲ್ಲಿ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೋ ಫೆರ್ನಾಂಡಿಸ್ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು.
ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ದೇವಾಡಿಗ, ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಉದ್ಯಮಿ ಉಮೇಶ ಎಲ್.ಮೇಸ್ತ ಗುಜ್ಜಾಡಿ, ತ್ರಾಸಿಯ ಉದ್ಯಮಿಗಳಾದ ನಾಗೇಶ ನಾಯಕ್, ಶಿವ ಆರ್.ಪೂಜಾರಿ, ಲಿಫ್ಟನ್ ಒಲಿವೇರಾ, ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷ ಮಾರ್ಕ್ ಡಿಅಲ್ಮೇಡಾ ಮೊದಲಾದವರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಸುಗುಣ ಆರ್.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ವೆಂಕಟೇಶಮೂರ್ತಿ ಎನ್.ಸಿ. ಸ್ವಾಗತಿಸಿದರು. ಎನ್ನೆಸ್ಸೆಸ್ ವಿದ್ಯಾರ್ಥಿನಿ ಗೌತಮಿ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.















