ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಶಾಲೆ ಅನುಷಾ ಚಾಂಪಿಯನ್

Click Here

Call us

Call us

Call us

ಕುಂದಾಪುರ: ಕಾರ್ಕಳದ ಬೈಲೂರಿನಲ್ಲಿ ನಡೆದ 2015-16ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಕುಂದಾಪುರ ತಾಲೂಕು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಅನುಷಾ ೨೦೦ಮೀಟರ್ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ 100ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ’ಜಿಲ್ಲಾ ಚಾಂಪಿಯನ್’ ಕ್ರೀಡಾ ಪಟುವಾಗಿ ಹೊರಹೊಮ್ಮಿದ್ದಾರೆ. ಮುಂದೆ ಬೆಂಗಳೂರಿನ ಹೊಸಕೋಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ಇವರು ಗುಲಾಬಿ ಮತ್ತು ನಾಗೇಶ ಪೂಜಾರಿ ನಾರ್ಕಳಿಯವರ ಪುತ್ರಿಯಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿಯವರು ತರಬೇತಿ ನೀಡಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರಾದ ಶಶಿಧರ ಶೆಟ್ಟಿ ವಂಡ್ಸೆ ಮತ್ತು ಶಿಕ್ಷಕವೃಂದದವರು ಸೂಕ್ತ ಪ್ರೋತ್ಸಾಹ ನೀಡಿದ್ದಾರೆ.

Leave a Reply