Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜದ ಮಾರ್ಗದರ್ಶಕರಾದ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ಸಮಾಜದ ಮಾರ್ಗದರ್ಶಕರಾದ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಹಿರಿಯ ನಾಗರಿಕರನ್ನು ಗೌರವಿಸುವ ಜೊತೆಗೆ ಅವರ ಬದುಕಿಗೆ ಆತ್ಮಸ್ಥರ್ಯ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡುವ ನಿಟ್ಟಿನಲ್ಲಿ ಸಮಾಜವೂ ಮುಂದಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

     ಅವಿಭಕ್ತ ಕುಟುಂಬಗಳಿದ್ದ ಕಾಲದಲ್ಲಿ ಹಿರಿಯರು ಮಕ್ಕಳು-ಮೊಮ್ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದರು. ಇಂದಿನ ಆಧುನಿಕ ಕಾಲದಲ್ಲಿ ಮನೆಯ ಯುವಕರು ಉದ್ಯೋಗ ನಿಮಿತ್ತ ಪರವೂರು-ಪರದೇಶಗಳಿಗೆ ತೆರಳುತ್ತಿದ್ದು ಮನೆಯಲ್ಲಿರುವ ಹಿರಿಯರು ಒಂದೋ ಏಕಾಂಗಿ ಜೀವನ ನಡೆಸುತ್ತಿರುತ್ತಾರೆ ಅಥವಾ ವೃದ್ಧಾಶ್ರಮ ಸೇರಿರುತ್ತಾರೆ. ನಗರ ಪ್ರದೇಶಕ್ಕಿಂತಲೂ ಗ್ರಾಮೀಣ ಪ್ರದೇಶದಲ್ಲಿರುವ ಹಿರಿಯರು ಹೆಚ್ಚು ಸಮಸ್ಯೆಗಳನ್ನು ಅನುಭವಿಸುತ್ತಿರುತ್ತಾರೆ. ಸಮಾಜದ ಕೊಂಡಿಯಾಗಿ ಕಿರಿಯರಿಗೆ ಮಾರ್ಗದರ್ಶನ ನೀಡುತ್ತಿದ್ದ ಹಿರಿಯರು ಅನುಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಹಿರಿಯ ನಾಗರಿಕರ ಪಾಲನೆ-ಪೋಷಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಗಳು ನಡೆಯಬೇಕು.

    ತಮ್ಮ ವೃತ್ತಿಯಿಂದ ನಿವೃತ್ತಿ ಪಡೆದ ಹಿರಿಯರು 90ನೇ ವರ್ಷದಲ್ಲಿ ಯಕ್ಷಗಾನ ಕಲಿತ ಕೋಟ ಶಿವರಾಮ ಕಾರಂತರ ಜೀವನದಿಂದ ಪ್ರೇರಣೆ ಪಡೆದು ಬದುಕನ್ನು ಅರ್ಥಪೂರ್ಣವಾಗಿ ಕಳೆದು ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜ ಮತ್ತು ಸರಕಾರದ ಬೆಂಬಲ ಹಿರಿಯ ನಾಗರಿಕರ ಬೆನ್ನಿಗಿದೆ ಎಂದ ಅವರು, ಕೋವಿಡ್-19ರ ಬಳಿಕ ಸ್ಥಗಿತವಾಗಿರುವ ಹಿರಿಯರಿಗಾಗಿಯೇ ಮೀಸಲಾಗಿದ್ದ ರೈಲ್ವೆ ಟಿಕೆಟ್ ದರದಲ್ಲಿನ ರಿಯಾಯತಿಯನ್ನು ಮರಳಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದರು.

    ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಹಿರಿಯ ನಾಗರಿಕರಿಗಾಗಿಕೇಂದ್ರ ಮತ್ತು ರಾಜ್ಯ ಸರಕಾರದ ಮಟ್ಟದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳನ್ನು ಹಿರಿಯ ನಾಗರಿಕರಿಗೆ ತಲುಪಿಸುವ ಕಾರ್ಯದಲ್ಲಿ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಕೈಜೋಡಿಸಬೇಕು. ಹಿರಿಯರು ನಮ್ಮಿಂದ ಬಯಸುವುದು ಪ್ರೀತಿ ಮತ್ತು ಗೌರವ ಮಾತ್ರ. ಮನೆಯ ಸದಸ್ಯರು ಹಿರಿಯರ ಬಗ್ಗೆ ಕಾಳಜಿ ವಹಿಸಬೇಕು. ಹಿರಿಯರು ಮಕ್ಕಳು-ಮೊಮ್ಮಕ್ಕಳ ಪ್ರೀತಿ ದೊರೆಯದೆ ಗೊಂದಲ, ಅಸಹಾಯಕತೆ ಅನುಭವಿಸುತ್ತಾರೆ. ಅಂತಹ ಸಂದರ್ಭದಲ್ಲಿ ಸಮಾಜ ಮತ್ತು ಸಂಘ-ಸAಸ್ಥೆಗಳು ಅವರ ರಕ್ಷಣೆ ಮತ್ತು ಆರೈಕೆಗೆ  ಮುಂದಾಗಬೇಕು ಎಂದರು.

    Click here

    Click here

    Click here

    Call us

    Call us

    ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಯುವ ಜನತೆಗಿಂತ ಹೆಚ್ಚು ಜ್ಞಾನ ಮತ್ತು ಅನುಭವ ಹಿರಿಯರಲ್ಲಿರುತ್ತದೆ. ಅವರ ಅನುಭವಗಳಿಂದ ಸಮಾಜವನ್ನು ಮುನ್ನಡೆಸಲು ಸಾಧ್ಯ. ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಅಳವಡಿಸಲು ಹಿರಿಯರ ಅನುಭವಗಳು ಸಹಕಾರಿಯಾಗುತ್ತವೆ. ಹಿರಿಯರಿಂದ ಕಲಿಯುವುದು ಬಹಳಷ್ಟಿದೆ. ಆದುದರಿಂದ ಹಿರಿಯರನ್ನು ಗೌರವಿಸಿ ಅವರ ಜೀವನಾನುಭವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿ ಸ್ವಸ್ಥ ಸಮಾಜವನ್ನು ರೂಪಿಸಬೇಕು ಎಂದರು.

    ಹಿರಿಯ ನಾಗರಿಕರಿಗಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಡಾ. ವಿರೂಪಾಕ್ಷ ದೇವರ ಮನೆ ವೃದ್ದಾಪ್ಯದ ಕಾಳಜಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಯಿತು.

    ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಶಶಿಕಲಾ ತೋನ್ಸೆ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ, ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೆಚ್. ವಿಶ್ವನಾಥ್ ಹೆಗ್ಡೆ , ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1ರ ಡಿ.ಜಿ.ಎಂ ಮಹಾಮಾಯಾ ಪ್ರಸಾದ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ ಮಮತಾ ಶೆಟ್ಟಿ, ಹಿರಿಯ ನಾಗರಿಕರ ಸಂಸ್ಥೆಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ಪ್ರಸ್ತಾವಿಸಿ ಸ್ವಾಗತಿಸಿದರು. ರೆಡ್ ಕ್ರಾಸ್ ಕಾರ್ಯದರ್ಶಿ ಗಣನಾಥ್ ಶೆಟ್ಟಿ ಎಕ್ಕಾರು ನಿರೂಪಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d