Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಪ್ರತೀಕ್ ಬಾಯಲ್
    ಉಡುಪಿ ಜಿಲ್ಲೆ

    ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಪ್ರತೀಕ್ ಬಾಯಲ್

    Updated:07/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆಯಡಿ ನಿಗದಿಯಾಗಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಪ್ರತಿ ಮನೆಗೂ ನೀರಿನ ಸಂಪರ್ಕ ಒದಗಿಸಿ ಶೇ. 100 ರಷ್ಟು ಪ್ರಗತಿ ದಾಖಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಹೇಳಿದರು.

    Click Here

    Call us

    Click Here

    ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕುಡಿಯುವ ನೀರಿನ ಗುಣಮಟ್ಟ ಮೇಲ್ವಿಚಾರಣೆಯ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಾರ್ಕಳ ಮತ್ತು ಕುಂದಾಪುರ ವ್ಯಾಪ್ತಿಯಲ್ಲಿ ಮೀಸಲು ಮತ್ತು ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮತ್ತು ಓವರ್ ಹೆಡ್ ಟ್ಯಾಂಕ್ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ಅನುಮತಿಯ   ಅಗತ್ಯವಿದ್ದು, ಅರಣ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸಬೇಕು. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ನಳ್ಳಿ ನೀರಿನ ಸಂಪರ್ಕಗಳ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿ ಕಾಮಗಾರಿ ಮುಗಿದಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಏಕ ಗ್ರಾಮ ಕುಡಿಯುವ ನೀರಿನ ಯೋಜನೆಯಡಿ 525ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 487 ಕಾಮಗಾರಿಗಳು ಪೂರ್ಣವಾಗಿದ್ದು 38  ಕಾಮಗಾರಿಗಳು ಪ್ರಗತಿಯಲ್ಲಿದ್ದು ಶೇ.93 ರಷ್ಟು ಗುರಿ ಸಾಧಿಸಲಾಗಿದೆ. ನಳ್ಳಿ ನೀರಿನ ಸಂಪರ್ಕದಲ್ಲಿ ಒಟ್ಟು 180868 ರಲ್ಲಿ 149416 ಸಂಪರ್ಕ ನೀಡಲಾಗಿದ್ದು ಶೇ. 83 ರಷ್ಟು ಗುರಿ ಸಾಧಿಸಲಾಗಿದ್ದು ಒಟ್ಟು 540.76 ವೆಚ್ಚದ ಕಾಮಗಾರಿಗಳು ಪೂರ್ಣವಾಗಿವೆ. ಜಿಲ್ಲೆಯ 7 ತಾಲೂಕುಗಳ 155 ಗ್ರಾಮದ 246 ಹಳ್ಳಿಗಳ 3402 ಆವಾಸಸ್ಥಾನಗಳ 2,47,190 ಮನೆಗಳಲ್ಲಿ 2,15,738 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದ್ದು 31,452 ಮನೆಗ¼ ನೀರಿನ ಸಂಪರ್ಕ ಬಾಕಿ ಇದೆ ಎಂದರು.

    ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಬೈಂದೂರು ತಾಲೂಕಿನ 788 ಗ್ರಾಮೀಣ ಜನವಸತಿ ಮತ್ತು ಬೈಂದೂರು ಪಟ್ಟಣ ವ್ಯಾಪ್ತಿಯಲ್ಲಿ 305.12 ಕೋಟಿ ವೆಚ್ಚದ ಕಾಮಗಾರಿ ಹಾಗೂ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದ ಕೆಪಿಸಿ  ಡ್ಯಾಂ ಬಳಿಯ ವಾರಾಹಿ ನದಿಯಿಂದ ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕಿನ 69 ಬೃಹತ್ ನೀರು ಸರಬರಾಜು ಯೋಜನೆಯಡಿ 528.42 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದ್ದು ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಬೇಕು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಹಾಜರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    nine − four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.