ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಭಾರತ ಸರಕಾರದ ಶಾಸನಬದ್ದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ಪಿ.ಎಚ್.ಡಿ ೩ ವರ್ಷ ಅವಧಿಗೆ ಫೆಲೋಶಿಪ್ ಮೂಲಕ ನೀಡಲಾಗುತ್ತಿದ್ದು ರಾಜ್ಯದ ನಿವಾಸಿಯಾಗಿರುವ ೩೫ ವರ್ಷ ವಯಸ್ಸಿನೊಳಗಿನ ಅರ್ಹ ಅಭ್ಯರ್ಥಿಗಳು ನವಂಬರ್ 30ರ ಒಳಗಾಗಿ ಸೇವಾ ಸಿಂಧು ತಂತ್ರಾಶ https://sevasindhu.karnataka.gov.in/sevasindhu/departmentservice ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.










