ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಶಿವರಾಮ ಕಾರಂತ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗಾಗಿನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿರುತ್ತಾನೆ.
ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










