ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ಎನ್ಎಸ್ಎಸ್ ಸ್ವಯಂಸೇವಕರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ಉಪ-ಪ್ರಾಂಶುಪಾಲ ಹಾಗೂ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಪದವಿ ಶಿಕ್ಷಣ ಸಂದರ್ಭದಲ್ಲಿ ಅನುಭವದ ಮೂಲಕ ಬದುಕಿನ ಶಿಕ್ಷಣ ಪಡೆಯಲು ಇರುವ ಮಹತ್ವದ ವೇದಿಕೆ ರಾಷ್ಟ್ರೀಯ ಸೇವಾ ಯೋಜನೆ. ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ದೇಶಪ್ರೇಮದ ಭಾವನೆಗಳನ್ನು ಎನ್.ಎಸ್.ಎಸ್. ಸ್ವಯಂಸೇವಕರು ಯೋಜನೆಯ ಮೂಲಕ ತಿಳಿಯಬಹುದು ಎಂದರು. ಇದೇ ಸಂದರ್ಭ ರಾಷ್ಟ್ರೀಯ ಸೇವಾ ಯೋಜನೆಯ ಹುಟ್ಟು, ಬೆಳವಣಿಗೆ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರದ ಕುರಿತು ಮಾಹಿತಿ ನೀಡಿದರು.
ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಮೌಲ್ಯಗಳನ್ನು ಕಟ್ಟಿಕೊಂಡು ಬದುಕಿನಲ್ಲಿ ಯಶಸ್ವಿಯಾಗಿ ಎಂದರು.
ಘಟಕ 2ರ ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕಿ ಪಲ್ಲವಿ ಪ್ರಾರ್ಥಿಸಿದರು. ಸ್ವಯಂಸೇವಕ ಪ್ರತಿನಿಧಿ ಶರಣ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಎನ್.ಎಸ್.ಎಸ್. ಘಟಕ 1ರ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿ, ಅಭಿಷೇಕ್ ಕುಲಾಲ್ ವಂದಿಸಿದರು.















