ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿಕೊಳ್ಳಲಾಯಿತು.
ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಅರಿತರು.

ಈ ಕೈಗಾರಿಕಾ ಭೇಟಿಯ ಉಸ್ತುವಾರಿಯನ್ನು ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರೆ ಉಪನ್ಯಾಸಕರು ವಹಿಸಿದ್ದರು.










