ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳು ಪಿಯುಸಿ ನಂತರದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕೋರ್ಸ್‌ಗಳನ್ನು ಸೇರುವ ಮುನ್ನ ಅದರ ಸಾಧಕ ಬಾದಕಗಳನ್ನು ತಿಳಿದುಕೊಂಡು ಸ್ವಯಂ ಆಸಕ್ತಿಯಿಂದ ಸೇರಿದಾಗಲೇ ಯಶಸ್ಸು ಸಾಧ್ಯವಾಗುತ್ತದೆ ಎಂದು ತ್ರಿಷಾ ವಿದ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ಧೀರಜ್ ಬೆಳ್ಳಾರೆ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್‌ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಥಾಮಸ್ ಪಿ.ಎ ಅಧ್ಯಕ್ಷತೆ ವಹಿಸಿದ್ದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಿರ್ಮಲಾ ಪೂಜಾರಿ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಸನ್ವಿತಾ ಎಂ. ಖಾರ್ವಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ. ಉಪಸ್ಥಿತರಿದ್ದರು.
ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಪ್ರೀತಾ ಆಚಾರ್ಯ ಪ್ರಾರ್ಥಿಸಿದರು. ಪ್ರಥ್ವಿ ಸ್ವಾಗತಿಸಿ, ಶ್ರಾವ್ಯ ಖಾರ್ವಿ ನಿರೂಪಿಸಿ, ನವ್ಯ ವಂದಿಸಿದರು.















